ಶಿರ್ವ: ಕಲಿಯುಗದ ಅಧಿದೇವ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾಗುವುದೇ ಪುಣ್ಯದ ಕಾರ್ಯ. ಕೃಷ್ಣ ಬೇರೆಯಲ್ಲ, ಶ್ರೀನಿವಾಸ ಬೇರೆಯಲ್ಲ. ಭಕ್ತಿಯ ಮೇಲೆ ದೇವರ ಅನುಗ್ರಹವಿದೆ ಎಂದು ಉಡುಪಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದರು.

ಕಟಪಾಡಿ ಎಸ್ವಿಎಸ್ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಲೋಕ ಕಲ್ಯಾಣಾರ್ಥವಾಗಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಕಟಪಾಡಿ ಪೇಟೆಯಿಂದ ಮೆರವಣಿಗೆಯ ಮೂಲಕ ಶ್ರೀನಿವಾಸ ದೇವರ ಮೂರ್ತಿಯನ್ನು ಪೂರ್ಣ ಕುಂಭ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತಿರುಮಲ ದೇವಸ್ಥಾನ ಸಮಿತಿಯವರ ಪ್ರಧಾನ ಅರ್ಚಕರಿಂದಲೇ ಕಲ್ಯಾಣೋತ್ಸವದ ಧಾರ್ಮಿಕ ಅನುಷ್ಠಾನಗಳು ಜರಗಿತು. ಶ್ರೀದೇವರ ವಿವಾಹ ಮಂಟಪ ಭಕ್ತರ ಕಣ್ಮನ ಸೆಳೆಯಿತು.

ದಕ್ಷಿಣ ಕನ್ನಡ .ಮತ್ತು ಉಡುಪಿ ಜಿಲ್ಲೆಗಳ ಸುಮಾರು ಮೂವತ್ತು ಸಾವಿರ ಭಕ್ತರು ಭಾಗವಹಿಸಿದ್ದರು. ವೃದ್ಧರು ಹಾಗೂ ವಿಶೇಷ ಚೇತನರಿಗೆ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಳ್ಳಲು ವಿಶೇಷ ಸೌಕರ್ಯ ಕಲ್ಪಿಸಲಾಗಿತ್ತು.

ಈ ಸಂದರ್ಭ ವಿಶೇಷವಾಗಿ ಮುಡಿಪು ಸೇವೆ ಸಲ್ಲಿಸುವವರಿಗೆ ತಿರುಪತಿ ಹುಂಡಿ ವ್ಯವಸ್ಥೆ ಮಾಡಲಾಗಿತ್ತು. ತಿರುಪತಿಯಿಂದ ತರಿಸಲಾದ ವಿಶೇಷ ಲಡ್ಡು ಪ್ರಸಾದ ಸಹಿತ ಪ್ರಸಾದ ವಿತರಣೆ ಪ್ರಸಾದ ಸ್ವೀಕಾರ ಹಾಗೂ ಅನ್ನಸಂತರ್ಪಣೆಯು ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-28-1368892611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.