ಉಡುಪಿ: ಬೀದಿನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ ಹಾಗೂ ಕಾಪು ಪುರಸಭೆ, ಬೈಂದೂರು ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 11.91 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಶ್ರಯ ತಾಣಕ್ಕಾಗಿ ₹33.93 ಲಕ್ಷದ ಕ್ರಿಯಾ ಯೋಜನೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.

ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯ ನಗರ ಪ್ರದೇಶದಲ್ಲಿ 7,197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಸುಮಾರು 20,382 ಬೀದಿನಾಯಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ನಗರ ಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ರೈಲು ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 446 ಬೀದಿನಾಯಿಗಳನ್ನು ಗುರುತಿಸಲಾಗಿ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್ಗೆ ಒಂದರಂತೆ ಹಾಗೂ ಪ್ರತೀ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಿ, ನಾಮಫಲಕ ಅಳವಡಿಸಿರುವ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು.

ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡಿದ್ದಲ್ಲಿ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿನಾಯಿ ಹಿಡಿಯುವ ಸಿಬ್ಬಂದಿಯನ್ನು ತರಬೇತಿ ನೀಡಿ ನಿಯೋಜಿಸಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-28-989816173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.