ಉಡುಪಿ: ದೇಶದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು 50 ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆ ತರುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ ಪರಿಸರ ಸ್ನೇಹಿಯಾಗಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವ ಗುರಿಯೊಂದಿಗೆ ಡೆಸ್ಟಿನೇಷನ್ ಡೆವಲಪ್ಮೆಂಟ್ ಸ್ಕೀಮ್ ಅನ್ನು ಜಾರಿಗೆ ತಂದಿದೆ ಎಂದರು.

ಜಿಲ್ಲೆಯಲ್ಲಿ ಈ ಯೋಜನೆಗೆ ಕೋಡಿ- ಕನ್ಯಾನ, ಕೋಡಿ– ಕುಂದಾಪುರ, ಬಾರ್ಕೂರು ಬಂದರು ಪ್ರದೇಶ ಹಾಗೂ ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಈ ಯೋಜನೆಗಳಲ್ಲಿ ನವೀಕರಿಸಬಹುದಾದದ ಇಂಧನಗಳ ಬಳಕೆ, ಮೂಲ ಸೌಕರ್ಯ ಹಾಗೂ ಪ್ರವಾಸಿಗರಿಗೆ ಜಾಗತಿಕ ಅಭಿಯಾನಗಳು ಸೇರಿ, ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲೆಯ ಒಂದು ಪ್ರವಾಸಿ ತಾಣವನ್ನು ಆಯ್ಕೆಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವು ಈ ಯೋಜನೆಯನ್ನು ಅನುಷ್ಠಾನಗೊಳಿಸಲು ₹300 ಕೋಟಿ ಅನುದಾನ ನೀಡಲಿದೆ. ಪ್ರವಾಸಿ ತಾಣದ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸಲಾಗುವುದು. ಅದಕ್ಕೆ ಅಗತ್ಯವಿರುವ ಭೂಮಿಯನ್ನೂ ಸಹ ಒದಗಿಸುವ ಅಗತ್ಯವಿದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.