ಉಡುಪಿ: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಸಹಯೋಗದೊಂದಿಗೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ಧಾರ್ಮಿಕತೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಲು ಉದ್ದೇಶಿಸಲಾಗಿದ್ದು ಅದಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗುವುದು ಎಂದರು.

ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಸಂಸ್ಥೆಯು ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಕಂಟೆಂಟ್ಗಳನ್ನು ತಯಾರಿಸುತ್ತಿದೆ. ಅದರಲ್ಲಿ ವಿದ್ಯಾರ್ಥಿಗಳು, ಕಂಟೆಂಟ್ ಕ್ರಿಯೇಟರ್ಸ್ ಭಾಗವಹಿಸಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ನೀಡುವ ಫೋಟೊ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. ವಿಶೇಷವಾಗಿ ಕಾಲೇಜು ಮಟ್ಟದಲ್ಲಿ ಲ್ಯಾಬ್ಗಳನ್ನು ಅಳವಡಿಸಿ ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ ಬಗ್ಗೆ ಅತ್ಯಪೂರ್ವ ಕಥಾವಸ್ತು, ಸಾಂಸ್ಕೃತಿಕ ಸಾಕ್ಷ್ಯಚಿತ್ರ ತಯಾರಿಸಿ ಹಂಚಿಕೊಳ್ಳಬಹುದು. ಅತ್ಯುತ್ತಮ ಗುಣಮಟ್ಟದ ಕಂಟೆಂಟ್ಗಳಿಗೆ ಪ್ರತಿ ತಿಂಗಳೂ ಪ್ರಶಸ್ತಿ ನೀಡುವ ಜೊತೆ ಸ್ಟೋರಿ ಆಫ್ ದ ಇಯರ್, ಎಮರ್ಜಿಂಗ್ ಸ್ಟೋರಿ ಟೆಲ್ಲರ್ ಹಾಗೂ ಕಲ್ಚರಲ್ ಡಾಕ್ಯುಮೆಂಟೇಶನ್ ವಿಭಾಗದಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ನೀಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇಲ್ಲಿನ ಬೀಚ್ಗಳಲ್ಲಿ ಜಲಕ್ರೀಡೆ, ಆಯುರ್ವೇದ ಪ್ರವಾಸೋದ್ಯಮ, ಸ್ಥಳೀಯ ಆಹಾರ ಪದ್ಧತಿ, ಪ್ರಾಕೃತಿಕ ಸ್ಥಳಗಳು, ಧಾರ್ಮಿಕ ಸ್ಥಳಗಳ ಬಗ್ಗೆ ವಿದೇಶಿಗರಿಗೆ ಹೆಚ್ಚು ಪ್ರಚಾರ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ನುರಿತ ಗೈಡ್ ಗಳನ್ನೂ ನಿಯೋಜಿಸುವ ಕುರಿತು ಯೋಜಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಿಂಧ್ಯಾ, ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ತನ್ಮಯ ಗೋಸ್ವಾಮಿ, ಮಾಹೆ ಎಂಐಸಿ ನಿರ್ದೇಶಕಿ ಶುಭಾ ಎಚ್.ಎಸ್. ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-147652034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.