ಐತಿಹಾಸಿಕ ಮಹತ್ವದ ತಾಣಗಳಿಗೂ ಬೇಕಿದೆ ಸಂರಕ್ಷಣೆ | ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಬೇಕಿದೆ ಹೊಸ ಯೋಜನೆ

ಉಡುಪಿ: ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಇಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಿ, ಕಾರ್ಯರೂಪಕ್ಕೆ ತರಬೇಕು ಎಂಬ ಬೇಡಿಕೆ ಜನರಿಂದ ಕೇಳಿಬಂದಿದೆ.

ರಾಜ್ಯ ಸರ್ಕಾರ ಈಗಾಗಲೇ ಪ್ರವಾಸೋದ್ಯಮ ನೀತಿ ರೂಪಿಸಿದ್ದು, ಅದರಂತೆ 2024–29ರ ಅವಧಿಗೆ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರವಾಸಿ ತಾಣಗಳ ಪಟ್ಟಿಯನ್ನೂ ಪರಿಷ್ಕರಿಸಿದೆ.

ಪ್ರವಾಸಿ ತಾಣಗಳ ಪಟ್ಟಿಯನ್ನು ಪರಿಷ್ಕರಿಸಿರುವುದರಿಂದ ಜಿಲ್ಲೆಯಲ್ಲೂ ಪ್ರವಾಸಿ ತಾಣಗಳ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ 22 ಹೊಸ ಪ್ರವಾಸಿ ತಾಣಗಳು ಸೇರ್ಪಡೆಗೊಂಡಿದ್ದು, ಒಟ್ಟು ಪ್ರವಾಸಿ ತಾಣಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಪ್ರವಾಸಿ ತಾಣಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಸಾಲದು, ಪ್ರವಾಸಿ ತಾಣಗಳಿಗೆ ಮೂಲಸೌಕರ್ಯವನ್ನೂ ಒದಗಿಸಬೇಕು. ಅದಕ್ಕಾಗಿ ಬಜೆಟ್ನಲ್ಲಿ ಅನುದಾನ ಮೀಸಲಿರಿಸಿ ಅನುಷ್ಠಾನಕ್ಕೆ ತರಬೇಕು ಎಂಬುದು ಜನರ ಅಭಿಪ್ರಾಯವಾಗಿದೆ.

ಈಗಾಗಲೇ ಜಿಲ್ಲೆಯಲ್ಲಿರುವ ಹಲವು ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಲ್ಲದೆ ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ಸಮಸ್ಯೆಯಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

ಜಿಲ್ಲೆಯಲ್ಲಿ ಬೀಚ್ ಮತ್ತು ದೇಗುಲ ಪ್ರವಾಸೋದ್ಯಮವೇ ಪ್ರಮುಖವಾಗಿದ್ದು, ಅಕ್ಟೋಬರ್ ತಿಂಗಳ ನಂತರ ಪ್ರವಾಸಿ ತಾಣಗಳಿಗೆ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡುತ್ತಾರೆ.

ಜಿಲ್ಲೆಯ ಪ್ರಮುಖ ಬೀಚ್ಗಳಲ್ಲೊಂದಾದ ಮಲ್ಪೆ ಬೀಚ್ಗೆ ರಜಾ ದಿನಗಳಲ್ಲಿ, ವಾರಾಂತ್ಯಗಳಲ್ಲಿ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಅಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಶೌಚಾಲಯ ವ್ಯವಸ್ಥೆಯೂ ಸಮರ್ಪಕವಾಗಿಲ್ಲದೆ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಬಹುತೇಕ ಬೀಚ್ಗಳಲ್ಲೂ ಇದೇ ಪರಿಸ್ಥಿತಿ ಇದೆ. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಇನ್ನಷ್ಟು ಪ್ರವಾಸಿಗರನ್ನು ಸೆಳೆಯಲು ಸರ್ಕಾರವು ಯೋಜನೆಗಳನ್ನು ಘೋಷಿಸಬೇಕು ಎಂದು ಜನರು ಆಗ್ರಹಿಸುತ್ತಾರೆ. ಜಿಲ್ಲೆಯಲ್ಲಿ ಸಾಕಷ್ಟು ಐತಿಹಾಸಿಕ ಮಹತ್ವದ ದೇವಾಲಗಳಿದ್ದು, ಪುರಾತತ್ವ ಇಲಾಖೆಯ ಅಧೀನಕ್ಕೆ ಒಳಪಡದ ಹಲವು ಪುರಾತನ ದೇಗುಲಗಳ ಸಂರಕ್ಷಣೆಗೂ ಮಹತ್ವ ನೀಡಬೇಕು. ಆ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಿದೆ ಎನ್ನುತ್ತಾರೆ ಸಾರ್ವಜನಿಕರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಕೇವಲ ಬೀಚ್ಗಳನ್ನು ಕೇಂದ್ರೀಕರಿಸಿ ನಡೆದರೆ ಸಾಲದು, ಐತಿಹಾಸಿಕ ಮಹತ್ವದ ತಾಣಗಳ ಸಂರಕ್ಷಣೆಗೂ ಅನುದಾನ ಮೀಸಲಿರಿಸಿ ಅದನ್ನು ಕಾರ್ಯರೂಪಕ್ಕೆ ತರುವ ಅಗತ್ಯವಿದೆ ಎಂದೂ ಹೇಳುತ್ತಾರೆ.

‘ಪ್ರಾಗೈತಿಹಾಸಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿ’

ಕರಾವಳಿಯಲ್ಲಿ ಬೀಚ್ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡುವುದರ ಜೊತೆಗೆ ಪ್ರಾಗೈತಿಹಾಸಿಕ ಐತಿಹಾಸಿಕ ನಿವೇಶನಗಳ ಪ್ರವಾಸೋದ್ಯಮ ಅಭಿವೃದ್ಧಿಗೂ ಬಜೆಟ್ನಲ್ಲಿ ಯೋಜನೆ ಘೋಷಿಸಿ ಅನುದಾನ ಮಂಜೂರು ಮಾಡಬೇಕು ಎಂದು ಪುರಾತತ್ವ ಶಾಸ್ತ್ರಜ್ಞ ಪ್ರೊ.ಟಿ. ಮುರುಗೇಶಿ ಆಗ್ರಹಿಸಿದ್ದಾರೆ.

ಬಾರ್ಕೂರು ಮತ್ತು ಬಸ್ರೂರಿನಲ್ಲಿ ಸಾಕಷ್ಟು ಪುರಾತನ ಕುರುಹುಗಳು ಕಾಣಸಿಗುತ್ತವೆ. ಅವುಗಳನ್ನು ಸ್ಥಳೀಯ ಕಟ್ಟಡಗಳಲ್ಲಿ ಸಂರಕ್ಷಿಸಿಡಬೇಕು. ಇಲ್ಲದಿದ್ದರೆ ಅವುಗಳು ನಶಿಸಿ ಹೋಗುವ ಸಾಧ್ಯತೆ ಇದೆ. ಪುರಾತನ ವಸ್ತುಗಳನ್ನು ಪ್ರದರ್ಶನಕ್ಕಿಡುವ ಮೂಲಕ ದೇಶ ವಿದೇಶದ ಪ್ರವಾಸಿಗರನ್ನೂ ಸೆಳೆಯಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕರಾವಳಿಯಲ್ಲಿ ಹಲವು ಆದಿಮ ಕಲಾ ನಿವೇಶನಗಳಿವೆ. ಅವುಗಳಿಗೆ ಯಾವ ಸಂರಕ್ಷಣೆಯೂ ಇಲ್ಲ. ಬುದ್ಧನಜೆಡ್ಡು ಅವಲಕ್ಕಿ ಪಾರೆಯಲ್ಲಿರುವ ಆದಿಮ ಕಲಾ ನಿವೇಶನಗಳು ದಟ್ಟಾರಣ್ಯದಲ್ಲಿದ್ದು ಅವುಗಳನ್ನು ಸಂರಕ್ಷಿಸಿದರೆ ಪ್ರವಾಸಿಗರನ್ನು ಜೊತೆಗೆ ಸಂಶೋಧಕರನ್ನೂ ಆಕರ್ಷಿಸಬಹುದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.