ಉಡುಪಿ: ಜಿಲ್ಲೆಗೆ ಬರುವ ಪ್ರವಾಸಿಗರ ಅನುಕೂಲಕ್ಕೆ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು ಪಟ್ಟಿಯನ್ನು ಪ್ರಸ್ತುತಪಡಿಸಿದ್ದು, ಮಲ್ಪೆಯಲ್ಲಿ ಈಗಿರುವ ಬೀಚ್, ಬೀಚ್ ಉತ್ತರ ಭಾಗದಲ್ಲಿರುವ ಜಾಗವನ್ನು ಸ್ವಾಧೀನಪಡಿಸಿಕೊಂಡು ವಲಯವಾರು ಅಭಿವೃದ್ಧಿ ಪಡಿಸಲು ಒತ್ತು ನೀಡಲಾಗಿದೆ ಎಂದರು.

ಸೇಂಟ್ ಮೇರೀಸ್ ದ್ವೀಪದಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಸಲು ಚಿಂತನೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಅನುದಾನದ ಲಭ್ಯತೆಯನ್ನು ಆಧರಿಸಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಲ್ಪೆ ಬೀಚ್, ಸೇಂಟ್ ಮೇರೀಸ್ ದ್ವೀಪ ಪ್ರದೇಶದಲ್ಲಿ ಪ್ರವಾಸಿಗರ ರಕ್ಷಣೆಯ ಉದೇಶಕ್ಕಾಗಿ ವಾಚ್ ಟವರ್ ನಿರ್ಮಾಣ, ಹೋರ್ಡಿಂಗ್ ಬೋರ್ಡ್ ಅಳವಡಿಕೆ, ಮಾಹಿತಿ ಫಲಕ, ಸಾರ್ವಜನಿಕ ಸೂಚನಾ ಫಲಕ, ಎಚ್ಚರಿಕೆಯ ಫಲಕ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ತಾಲ್ಲೂಕಿನ ಕದಿಕೆ ಗ್ರಾಮದ ಕಡಲ ತೀರದ ನಿರ್ವಹಣೆ, ಸಮಗ್ರ ಅಭಿವೃದ್ಧಿ, ಜಲ ಸಾಹಸ ಚಟುವಟಿಕೆಗಳು ಹಾಗೂ ಸೇಂಟ್ ಮೇರೀಸ್ ದ್ವೀಪಕ್ಕೆ ಪ್ರಯಾಣಿಕರ ದೋಣಿ ಸೇವೆಯನ್ನು ಟೆಂಡರ್ ಕರೆದು, ಶೇಕಡವಾರು ಹಂಚಿಕೆ ಆಧಾರದಲ್ಲಿ ನೀಡಬೇಕು ಎಂದು ತಿಳಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಮಲ್ಪೆ ಬೀಚ್ನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಪ್ರದಾಯಿಕ ಮೀನುಗಾರರು, ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ತೊಂದರೆಯಾಗದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಕಡಲ ತೀರದ ಬಗ್ಗೆ ಮಾಹಿತಿ ಕೊರತೆಯಿಂದಾಗಿ ಕೆಲವು ಅವಘಡಗಳು ಸಂಭವಿಸುತ್ತಿವೆ. ಹೀಗಾಗದಂತೆ ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿರುವ ಸೀ ವಾಕ್ನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಉದ್ಯಾನ ನಿರ್ಮಾಣ, ಸಮುದ್ರ ವೀಕ್ಷಣೆಗೆ ಕುಳಿತುಕೊಳ್ಳಲು ಬೆಂಚ್ ಸೇರಿದಂತೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್.ಎಂ., ಟೂರಿಸಂ ಅಶೋಸಿಯೇಷನ್ನ ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರವಾಸಿಗರು ಬೋಟ್ಗಳಲ್ಲಿ ಪ್ರಯಾಣಿಸುವಾಗ ತಪ್ಪದೇ ಲೈಫ್ ಜಾಕೆಟ್ ಧರಿಸಬೇಕು. ತಪ್ಪಿದ್ದಲ್ಲಿ ಅಂಥವರಿಗೆ ದಂಡ ವಿಧಿಸಲಾಗುವುದು. ಕರಾವಳಿ ಕಾವಲು ಪೊಲೀಸ್ನವರು ಈ ಕುರಿತು ಪರಿಶೀಲನೆ ನಡೆಸಬೇಕು
ಸ್ವರೂಪಾ ಟಿ.ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.