ಉಡುಪಿ: ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಚೆಗೆ ಅಳವಡಿಸಿರುವ ಸ್ಪೀಡ್ ರಾಡಾರ್ ಕ್ಯಾಮೆರಾದ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡಾಸ್ತ್ರ ಪ್ರಯೋಗಿಸುವ ಕಾರ್ಯ ಆರಂಭವಾಗಿದೆ.

ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾಚರಣೆ ಆರಂಭಿಸಿ ನಾಲ್ಕು ದಿನದೊಳಗೆ ಜಿಲ್ಲೆಯಲ್ಲಿ ಒಟ್ಟು 46,753 ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ. 235 ಮಂದಿಗೆ ಈಗಾಗಲೇ ದಂಡ ಪಾವತಿಸಲು ಚಲನ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅತಿ ವೇಗ, ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ, ಸೀಟ್ ಬೆಲ್ಟ್ ಧರಿಸದೆ ಪ್ರಯಾಣ ಮೊದಲಾದ ಕಾನೂನು ಉಲ್ಲಂಘನೆ ಪತ್ತೆಯಾಗಿದೆ ಎಂದು ನಿಯಂತ್ರಣ ಕೊಠಡಿಯ ಎಸ್ಐ ಅಜ್ಮಲ್ ಇಬ್ರಾಹಿಂ ತಿಳಿಸಿದರು.

ಸಂಚಾರ ನಿಯಮ ಉಲ್ಲಂಘಿಸಿರುವ 50ರಿಂದ 100 ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಈ ಕ್ಯಾಮೆರಾದ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ನಿಯಮ ಉಲ್ಲಂಘಿಸುವವರ ಮನೆಗಳಿಗೆ ಅಂಚೆ ಮೂಲಕ ದಂಡದ ಚಲನ್ ಕಳುಹಿಸಲಾಗುತ್ತಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಹೆಲ್ಮೆಟ್ ಧರಿಸದೆ ಪ್ರಯಾಣ, ಸೀಟ್ ಬೆಲ್ಟ್ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಮೊಬೈಲ್ನಲ್ಲಿ ಮಾತನಾಡಿಕೊಂಡು ವಾಹನ ಚಾಲನೆ ಮಾಡಿದರೆ ದ್ವಿಚಕ್ರ ವಾಹನಕ್ಕೆ ₹1,200, ಲಘು ವಾಹನಗಳಿಗೆ ₹3,000 ಘನ ವಾಹನಗಳಿಗೆ ₹5,000 ದಂಡ ವಿಧಿಸಲಾಗುತ್ತಿದೆ ಎಂದು ವಿವರಿಸಿದರು.

ಅಂತರರಾಜ್ಯದ ವಾಹನಗಳು ನಿಯಮ ಉಲ್ಲಂಘಿಸಿದರೆ ಅವರಿಗೂ ದಂಡದ ಚಲನ್ ಕಳುಹಿಸಲಾಗುವುದು. ಸದ್ಯ ಅವರು ಉಡುಪಿ ಜಿಲ್ಲೆಗೆ ಬಂದು ದಂಡ ಕಟ್ಟಬೇಕಾಗಿದೆ. ಇತರರು ಸಮೀಪದ ಯಾವುದೇ ಠಾಣೆಗಳಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಸಿರುವುದರಿಂದ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದಷ್ಟೇ ಅಲ್ಲದೆ ಅಪರಾಧ ಕೃತ್ಯ ನಡೆಸಿ ಪರಾರಿಯಾಗುವವರ ವಾಹನಗಳನ್ನು ಪತ್ತೆ ಹಚ್ಚಲು ಕೂಡ ಸಾಧ್ಯವಾಗಲಿದೆ ಎಂದು ಅವರು ವಿವರಿಸಿದರು

ಜಿಲ್ಲೆಯ ಪಡುಬಿದ್ರಿಯ ಉಚ್ಚಿಲ, ಕಾಪುವಿನ ದಂಡತೀರ್ಥ, ಕೋಟದ ತೆಕ್ಕಟ್ಟೆ, ಗಂಗೊಳ್ಳಿಯ ತ್ರಾಸಿ ಮತ್ತು ಬೈಂದೂರಿನ ನಾಯಕನ ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಕಾರ್ಕಳದ ದೂಪದಕಟ್ಟೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಕ್ಯಾಮೆರಾ ಅಳವಡಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-1532415147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.