ಉಡುಪಿ: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲೊಡ್ಡುತ್ತಿದ್ದು, ಈ ರೋಗವನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ಎಲ್ಲಾ ಸಂಬಂಧಪಟ್ಟ ಇಲಾಖೆಗಳು, ಸಮನ್ವಯದಿಂದ ಕಾರ್ಯನಿರ್ವಹಿಸಿ, ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದರು.

ನಗರದ ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಭಾರತ್ 100 ದಿನಗಳ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯಮುಕ್ತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ನೂರು ದಿನಗಳ ಕ್ಷಯರೋಗ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದಲ್ಲಿ ಕ್ಷಯರೋಗಿಗಳನ್ನು ಪತ್ತೆಹಚ್ಚಿ, ಅವರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಲಿದೆ ಎಂದರು.

ಅಭಿಯಾನದಲ್ಲಿ ಜನರ ಆರೋಗ್ಯ ಕಾಪಾಡುವಲ್ಲಿ ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸಲಿದ್ದು, ಸಾಂಕ್ರಾಮಿಕ ರೋಗಗಳ ಬಗ್ಗೆ ಗ್ರಾಮೀಣ ಭಾಗ ಸೇರಿದಂತೆ ಎಲ್ಲಾ ಭಾಗಗಳಲ್ಲಿ ವ್ಯಾಪಕ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಮಾತನಾಡಿ, ಕ್ಷಯ ಮುಕ್ತ ಅಭಿಯಾನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಪಾಸಣೆಗೆ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷಯ ಮುಕ್ತ ಭಾರತ್ ಅಭಿಯಾನದಲ್ಲಿ ಸರ್ಕಾರ ಗುರುತಿಸಿರುವ ಹಳ್ಳಿಗಳ ಜನವಸತಿ ಪ್ರದೇಶಗಳಲ್ಲಿ ಟಿ.ಬಿ. ಸ್ಕ್ರೀನಿಂಗ್ ನಡೆಸಿ, ರೋಗ ಲಕ್ಷಣಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ಗುಣಮುಖರಾಗಿ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳೆಂದು ಆಯ್ಕೆ ಮಾಡಲಾದ 64 ಗ್ರಾಮ ಪಂಚಾಯಿತಿಗಳಲ್ಲಿ 18 ಗ್ರಾಮ ಪಂಚಾಯಿತಿಗಳಿಗೆ ಕಂಚಿನ ಪದಕ, 26 ಗ್ರಾಮ ಪಂಚಾಯಿತಿಗಳಿಗೆ ಬೆಳ್ಳಿ ಪದಕ ಹಾಗೂ 20 ಗ್ರಾಮ ಪಂಚಾಯಿತಿಗಳಿಗೆ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್ ಉಪಸ್ಥಿತರಿದ್ದರು.

ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಆಲಂದೂರು ಮಂಜುನಾಥ ಎಸ್. ಗಾಣಿಗ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಜೈನ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-28-1292670601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.