ಶಿರ್ವ: ಒಂದು ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ದಾಖಲಾತಿ ಚರಿತ್ರೆಗೆ ಪ್ರಾಮುಖ್ಯವಾಗುತ್ತದೆ. ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕಾದ ಅನಿವಾರ್ಯತೆ ಇದೆ. ಮುಂದಿನ ತಲೆಮಾರು ಜನಪರ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಈ ದಾಖಲೆಗಳು ಸಹಕಾರಿಯಾಗಿವೆ ಎಂದು ಉಡುಪಿ ತಾಲ್ಲೂಕು ಭೂನ್ಯಾಯ ಮಂಡಳಿಯ ಸದಸ್ಯ ರೋಯ್ಸ್ ಮಾರ್ವಿನ್ ಫರ್ನಾಂಡಿಸ್ ಹೇಳಿದರು.

ಉದ್ಯಾವರ ಫ್ರೆಂಡ್ಸ್ ಸರ್ಕಲ್ನ ಆಶ್ರಯದಲ್ಲಿ ಉದ್ಯಾವರದಲ್ಲಿ ನಡೆದ ‘ಯು.ಎಫ್.ಸಿ. ಮಾತುಕತೆ - 2025’ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆರೋಗ್ಯವಂತ ಮನಸ್ಸುಗಳನ್ನು ಕೂಡಿಸಿಕೊಂಡು ಸೌಹಾರ್ದದಿಂದ ಸಾಮಾಜಿಕ ಚಟುವಟಿಕೆ ನಡೆಸುವ ಮೂಲಕ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ಸಂಸ್ಥೆ ನಡೆಸಿರುವ ಕಾರ್ಯ ದಾಖಲಾಗಲಿ ಎಂಬ ಕಾರಣಕ್ಕೆ ಹತ್ತು ವರ್ಷಗಳಿಂದ ಈ ವಾರ್ಷಿಕ ಸಂಚಿಕೆ ಹೊರತರಲಾಗುತ್ತಿದೆ. ಯಾವುದೇ ಪ್ರಚಾರಕ್ಕಾಗಿ ಅಲ್ಲ ಎಂದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಿಯಾಝ್ ಪಳ್ಳಿ ಮಾತನಾಡಿದರು.

ನಿರ್ದೇಶಕರಾದ ಚಂದ್ರಾವತಿ ಎಸ್. ಭಂಡಾರಿ, ಶರತ್ ಕುಮಾರ್, ಯು.ಪದ್ಮನಾಭ ಕಾಮತ್, ಕೋಶಾಧಿಕಾರಿ ಸತೀಶ್ ಡಿ. ಸಾಲ್ಯಾನ್, ಉಪಾಧ್ಯಕ್ಷ ಶ್ರೀಧರ ಮಾಬಿಯಾನ್, ಕಾರ್ಯದರ್ಶಿಗಳಾದ ಆಶಾ ವಾಸು, ಭಾಸ್ಕರ್ ಬಂಗೇರ, ಮಾಜಿ ಅಧ್ಯಕ್ಷ ಅನುಪ್ ಕುಮಾರ್, ಸದಸ್ಯರಾದ ಲೋಕನಾಥ್ ಬೊಳ್ಜೆ ಉಪಸ್ಥಿತರಿದ್ದರು.

ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-388307597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.