ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಅಂಗವಾಗಿ ಇದೇ 30ರಿಂದ ಜುಲೈ 29ರ ವರೆಗೆ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇದೇ 20ರಿಂದ 29ರವರೆಗೆ ಪೂರ್ವ ತಯಾರಿ, ತರಬೇತಿ ಮತ್ತು ಮುದ್ರಣ ಕಾರ್ಯಗಳು ನಡೆಯಲಿವೆ. 29ರಿಂದ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ನಡೆಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದ್ದು, ಆ.5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯಾಗಿದೆ ಎಂದು ವಿವರಿಸಿದರು.

ಆ.5ರಿಂದ ಅಕ್ಟೋಬರ್ 3ರವರೆಗೆ ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಅ.7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

ಯಾವುದೇ ಅರ್ಹ ಮತದಾರರನ್ನು ಕೈಬಿಡುವಂತಿಲ್ಲ ಮತ್ತು ಯಾವುದೇ ಅನರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವಂತಿಲ್ಲ ಎಂಬುದು ಎಸ್ಐಆರ್ನ ಗುರಿಯಾಗಿದೆ ಎಂದು ಅವರು ಹೇಳಿದರು.

ಪೂರ್ವ ತಯಾರಿ ಹಂತದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.

ಮನೆ–ಮನೆ ಭೇಟಿ ಹಂತದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಆಯಾ ಭಾಗದ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರಿಗೆ ಮತದಾರರ ಪೂರ್ವ ಮುದ್ರಿತ ವಿವರಗಳಿರುವ ಗಣತಿ ನಮೂನೆಯನ್ನು ದ್ವಿಪ್ರತಿಯಲ್ಲಿ ವಿತರಿಸುತ್ತಾರೆ. ಮತ್ತು ಅದನ್ನು ಭರ್ತಿ ಮಾಡಲು ಮಾರ್ಗದರ್ಶನ ನೀಡುತ್ತಾರೆ ಎಂದರು.

ಪ್ರತಿಯೊಬ್ಬ ಮತದಾರರ ಗಣತಿ ನಮೂನೆಯನ್ನು ಬೂತ್ ಮಟ್ಟದ ಅಧಿಕಾರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಮತದಾರನು ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು. ಬೂತ್ ಮಟ್ಟದ ಅಧಿಕಾರಿಯು ಆ ಮತದಾರನ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1016612125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.