ಉಡುಪಿ: ಬಹುಮಹಡಿ ವಸತಿ ಸಮುಚ್ಚಯಗಳ ಕೊಳಚೆ ನೀರನ್ನು ಶುದ್ಧೀಕರಿಸದೆ ತೋಡುಗಳ ಮೂಲಕ ನದಿಗೆ ಬಿಟ್ಟು ಜಲಮಾಲಿನ್ಯ ಉಂಟುಮಾಡಿದರೆ ಅಂತಹ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಲತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ವಹಣೆ, ಕಲುಷಿತ ನೀರನ್ನು ತೋಡುಗಳ ಮೂಲಕ ಇಂದ್ರಾಣಿ ನದಿ ಮೂಲಗಳಿಗೆ ಬಿಡುವುದರ ಕುರಿತು ಸರ್ವೆ ಕಾರ್ಯವನ್ನು ಎಂ.ಐ.ಟಿ. ಸಂಸ್ಥೆಯ ವತಿಯಿಂದ ಕೈಗೊಂಡಿದ್ದು, ಕೆಲವು ವಸತಿ ಸಮುಚ್ಚಯಗಳು ನೇರವಾಗಿ ನದಿಗೆ ತ್ಯಾಜ್ಯ ನೀರು ಬಿಡುತ್ತಿರುವ ಬಗ್ಗೆ ಡ್ರೋನ್ ಸರ್ವೆಯಲ್ಲಿ ಕಂಡುಬಂದಿದೆ. ಈ ಬಗ್ಗೆ ಮಾಲೀಕರು ಎಚ್ಚರ ವಹಿಸಬೇಕು. ತಪ್ಪಿದಲ್ಲಿ ಅಂತಹವರಿಗೆ ದಂಡ ವಿಧಿಸಲಾಗುವುದು ಎಂದರು. ನಗರಸಭಾ ವ್ಯಾಪ್ತಿಯ ಕೆಲವು ಅಪಾರ್ಟ್ಮೆಂಟ್ಗಳಲ್ಲಿ ಕೊಳಚೆ ನೀರು ನಿರ್ವಹಣೆ ಘಟಕ ಇಲ್ಲದಿರುವುದು ಕಂಡು ಬಂದಿದೆ. ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಅವುಗಳನ್ನು ಉದ್ಯಾನ ಸೇರಿದಂತೆ ವಿವಿಧೆಡೆ ಮರುಬಳಕೆ ಮಾಡಲು ಮುಂದಾಗಬೇಕು ಎಂದರು. ಸಕ್ಕಿಂಗ್ ಯಂತ್ರಗಳ ಬಳಕೆಯೊಂದಿಗೆ ತ್ಯಾಜ್ಯ ನೀರಿನ ವೈಜ್ಞಾನಿಕ ವಿಲೇವಾರಿಗೆ ಮುಂದಾಗಬೇಕು. ತ್ಯಾಜ್ಯ ನೀರನ್ನು ನದಿ ತೋಡುಗಳಿಗೆ ಬಿಡುವುದರಿಂದ ಕೆಲವು ಬಾವಿಗಳ ನೀರು ಕಲುಷಿತಗೊಳ್ಳುತ್ತಿದೆ ಹಾಗೂ ನದಿಯ ನೀರು ಸಹ ಮಾಲಿನ್ಯವಾಗುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕಿದೆ ಎಂದರು. ನಗರವನ್ನು ಸ್ವಚ್ಛ ವಾಗಿರಿಸಿಕೊಳ್ಳಬೇಕೆಂಬ ಮನೋಭಾವವನ್ನು ಜನರು ಹೊಂದುವುದರೊಂದಿಗೆ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಎಂ.ಐ.ಟಿ. ಅಸೋಸಿಯೇಟ್ ಡೈರೆಕ್ಟರ್ ರಾಘವೇಂದ್ರ ಹೊಳ್ಳ, ಶಿಲ್ಪಾ ಭಟ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-1701811049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.