ಕಾಪು (ಪಡುಬಿದ್ರಿ): ಕುಡಿಯುವ ನೀರಿನ ಸಮಸ್ಯೆ ಇರುವ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ, ಕುಡಿಯುವ ನೀರಿನ ಪೈಪ್ಲೈನ್ ನಿರ್ಮಿಸಲು ಟಾಸ್ಕ್ಫೋರ್ಸ್ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಕಿಂಡಿ ಅಣೆಕಟ್ಟೆಗಳಲ್ಲಿ ನೀರಿನ ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯಿತಿಯ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಲಮೂಲಗಳ ವಿಸ್ತರಣೆ, ಜಲಮೂಲಗಳ ಜೋಡಣೆ ಸಾಧ್ಯತೆಗಳು ಹಾಗೂ ಸಾಧಕ– ಬಾಧಕಗಳ ಕುರಿತು ಅಧ್ಯಯನ ನಡೆಸಿ 34 ದಿನಗಳಲ್ಲಿ ವರದಿ ಸಲ್ಲಿಸುವಂತೆ ಜಲಜೀವನ್ ಮಿಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕಿನಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ, ಜಲಮೂಲಗಳ ವಿಸ್ತರಣೆ, ಜಲಮೂಲಗಳ ಪರಸ್ಪರ ಜೋಡಣೆ ಕುರಿತಾಗಿ ವಿವಿಧ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮ್ಮ ಪ್ರದೇಶದ ಸಮಸ್ಯೆಗಳನ್ನು ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಜೇಮ್ಸ್ ಡಿಸೋಜ ಮಾತನಾಡಿ, ತಾಲ್ಲೂಕಿನ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷವಾಗಿ ಕೋಟೆ ಭಾಗದಲ್ಲಿ ನೀರು, ಉಪ್ಪುನೀರು ಸಮಸ್ಯೆ ಇದೆ. ಕುರ್ಕಾಲು ಹೊಳೆಯಿಂದ ಪುರಸಭೆಗೆ ನೀರು ಹರಿದು ಬರುವುದರಿಂದ ಸಮಸ್ಯೆ ಹೆಚ್ಚುತ್ತಿದೆ. ಹೀಗಾಗಿ ಸ್ಥಳೀಯ ನೀರಿನ ಮೂಲಗಳ ಸಂರಕ್ಷಣೆ, ಪರ್ಯಾಯ ಜಲಮೂಲಗಳ ಬಗ್ಗೆ ಚಿಂತನೆ ಅಗತ್ಯವಿದೆ ಎಂದರು.

ಸ್ಥಳೀಯ ಜಲಮೂಲಗಳನ್ನು ಉಳಿಸಿಕೊಂಡು ಬಾವಿ, ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಪೈಪ್ಲೈನ್ ಸಂಪರ್ಕಗಳನ್ನು ಸಮರ್ಪಕ ಸ್ಥಿತಿಯಲ್ಲಿ ನಿರ್ವಹಿಸುವುದು ಅಗತ್ಯ ಎಂದು ಶಾಸಕ ಗುರ್ಮೆ ಹೇಳಿದರು.

ಕುರ್ಕಾಲು ಹೊಳೆಯಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಬಾವಿ, ಕೊಳವೆ ಬಾವಿ, ಬೋರ್ವೆಲ್ಗಳ ಪರಿಶೀಲನೆ ನಡೆಸಲಾಗಿದ್ದು, ಕೆಲವೆಡೆ ಪೈಪ್ಲೈನ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಕಡೆ ಸಂಪರ್ಕ ಕಲ್ಪಿಸಲು ಪ್ರಯತ್ನ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೋಟಗಾರಿಕಾ ಇಲಾಖೆಯಡಿ ಕೃಷಿ ಹೊಂಡ ನಿರ್ಮಿಸಲು ಅವಕಾಶವಿದ್ದು, ಈಗ ಅದನ್ನು ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ಉಪಯೋಗವಾಗುತ್ತದೆ. ಪ್ರಧಾನ ಮಂತ್ರಿ ಕೃಷಿ ಸಂಚಯ ಯೋಜನೆಯಡಿ ₹75 ಸಾವಿರ ಸಬ್ಸಿಡಿ ಲಭ್ಯವಿದ್ದು, ಎಪಿಎಲ್ ಅಥವಾ ಬಿಪಿಎಲ್ ಎಂಬ ಮಾನದಂಡ ಇಲ್ಲದೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಹಶೀಲ್ದಾರ್ ಅನಂತ ಶಂಕರ್, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-28-291327482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.