ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮವಾಗಿ ಕಾರ್ಮಿಕರೊಬ್ಬರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ಕೊಡವೂರು ಸಮೀಪ ಶುಕ್ರವಾರ ನಡೆದಿದೆ.

ರಮೇಶ (25) ಮಣ್ಣಿನಡಿಯಲ್ಲಿ ನಿಲುಕಿಕೊಂಡವರು. ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬುವವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ ಮಧ್ವನಗರ ನಿವಾಸಿ ಚೇತನ್ ಎಂಬುವವರ ಜಾಗದಲ್ಲಿ ಬಾವಿ ನಿರ್ಮಾಣ ಕೆಲಸಕ್ಕೆಂದು ಕೊಪ್ಪಳ ಜಿಲ್ಲೆಯ ಐವರು ಕೂಲಿ ಕಾರ್ಮಿಕರನ್ನು ಕರೆತಂದು ಬಾವಿಯಿಂದ ಮಣ್ಣು ತೆಗೆಸುತ್ತಿದ್ದರು.

ಕಾಮಗಾರಿ ನಡೆಯುತ್ತಿದ್ದಾಗ ಬಾವಿಯ ದಂಡೆಯ ಮಣ್ಣು ಒಮ್ಮೆಲೆ ಕುಸಿದು ರಮೇಶ ಅವರ ಮೈಮೇಲೆ ಬಿದ್ದು ಅವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುಮಾರು 7ರಿಂದ 8 ಅಡಿ ಆಳದ ಹೊಂಡದಲ್ಲಿ ಮಣ್ಣು ತುಂಬಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1658982797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.