ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇದೇ 24 ರಿಂದ 26 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 24 ರಂದು ಬೆಳಿಗ್ಗೆ 10.30 ಕ್ಕೆ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.45ಕ್ಕೆ ಉಡುಪಿಯ ಅಯ್ಯಪ್ಪ ನಗರದಲ್ಲಿರುವ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಅಧೀನದಲ್ಲಿರುವ ವಿಜೇತ ವಿಶೇಷ ವಸತಿ ಶಾಲೆಗೆ ಭೇಟಿ ನೀಡುವರು. 3.30ಕ್ಕೆ ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಮಹಿಳಾ ಸ್ಪಂದನ ಸಮಾವೇಶದಲ್ಲಿ ಭಾಗಿಯಾಗುವರು. ಸಂಜೆ 5.30 ಕ್ಕೆ ಉಡುಪಿ ನಗರದ ಐ.ಬಿ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.25 ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿನೀಡುವರು. 11 ಗಂಟೆಗೆ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಧ್ಯಾಹ್ನ 12 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವರು. 3.30 ಕ್ಕೆ ಮಿಷನ್ ಕಂಪೌಂಡ್ ಬಳಿ ಇರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಉಡುಪಿಯ ಬನ್ನಂಜೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. 26 ರಂದು ಬೆಳಿಗ್ಗೆ 9.15 ಕ್ಕೆ ಬ್ರಹ್ಮಾವರದ ಗೋಡಂಬಿ ಫ್ಯಾಕ್ಟರಿಗೆ ಭೇಟಿ ನೀಡಿ, 11 ಗಂಟೆಗೆ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-28-1519362132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.