ಉಡುಪಿ: ಮಹಿಳಾ ಪರ ಚಿಂತನೆಗಳು ಕೇವಲ ಪಾಶ್ಚಿಮಾತ್ಯ ರಾಷ್ಟ್ರಗಳ ಕಲ್ಪನೆಯಲ್ಲ ಭಾರತೀಯ ತಾತ್ವಿಕ ಚಿಂತನೆಗಳಲ್ಲೂ ಮಹಿಳಾ ಪರ ಹೋರಾಟದ ಧ್ವನಿಗಳಿವೆ ಎಂದು ಲೇಖಕಿ ಬಿ.ಎಂ.ರೋಹಿಣಿ ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಮಹಿಳಾ ದಿನಾಚರಣಾ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನಮ್ಮ ದೇಶದ ಪುರಾಣ ಮತ್ತು ಇತಿಹಾಸಗಳನ್ನು ವಾಸ್ತವಿಕ ದೃಷ್ಟಿಕೋನದಿಂದ ವಿಶ್ಲೇಷಿಸಿದರೆ ಮಹಿಳಾ ಪರ ಚಿಂತನೆಗಳನ್ನು ಕಾಣಬಹುದು. ಆ ಚಿಂತನೆಯು ನಮ್ಮ ದೇಶದ ಸ್ತ್ರೀಯರಲ್ಲಿ ಆತ್ಮಭಿಮಾನವನ್ನು ಹೆಚ್ಚಿಸಿ ಸಂವಿಧಾನವು ಪ್ರತಿಪಾದಿಸುವ ಸಮಾನತೆಯನ್ನು ಪ್ರತಿಪಾದಿಸಲು ದಾರಿಯಾಗುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ಸಭಾಪತಿ ಬಸರೂರು ರಾಜೀವ ಶೆಟ್ಟಿ, ಒಂದೂವರೆ ಶತಮಾನದಿಂದಲೇ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಹಿಳಾ ಸಮಾನತೆಯನ್ನು ಪ್ರತಿಪಾದಿಸಿದೆ. ಡಾ.ಶಿವರಾಮ ಕಾರಂತರ ದೃಷ್ಟಿಕೋನ ಅದಕ್ಕೆ ಪೂರಕವಾಗಿದೆ ಎಂದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಮಾತನಾಡಿ, ಯುವ ಜನತೆಗೆ ಮಹಿಳಾ ಸಬಲೀಕರಣದ ಮಹತ್ವವನ್ನು ತಿಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ದಿಶಾ ಪ್ರಾರ್ಥಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಬಿ.ಎಂ ರೋಹಿಣಿ ಅವರು ‘ಕಾರಂತರ ಮಹಿಳಾ ಪರ ಚಿಂತನೆಗಳು’ ಮತ್ತು ದಿವ್ಯರಾಣಿ ಪ್ರದೀಪ್ ಅವರು ‘ಮಹಿಳಾ ಸಬಲೀಕರಣದ ಸವಾಲುಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಮಹಿಳಾ ಸಂಘದ ಸಂಚಾಲಕಿ ವಿದ್ಯಾ ಡಿ., ಸನ್ಮಾನ ಪತ್ರ ವಾಚಿಸಿದರು. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಸ್ಥಾಪಕಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ರೆಡ್ ಕ್ರಾಸ್ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು.

ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರು. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ನಿಕೇತನ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.