ಉಡುಪಿ: ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನ ಕಲಾವಿದರ ಸಮಾವೇಶ ಇದೇ 31 ರಂದು ಪರ್ಯಾಯ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ 9 ರಿಂದ ಕಲಾವಿದರಿಗೆ ವೈದ್ಯಕೀಯ ತಪಾಸಣೆ ಆರಂಭವಾಗಲಿದೆ. 10.30ಕ್ಕೆ ಪರ್ಯಾಯ ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕಲಾಮಂಡಲಮ್ ನಂದಕುಮಾರ್ ಮತ್ತು ತಂಡದವರಿಂದ ‘ಕಲ್ಯಾಣ ಸೌಗಂಧಿಕಂ' ತುಳ್ಳಲ್ ತ್ರಯಮ್ ಪ್ರದರ್ಶನಗೊಳ್ಳಲಿದೆ.

ಮಧ್ಯಾಹ್ನ 12 ರಿಂದ ಕಲೆ ಕಲಾವಿದ-ಪ್ರೇಕ್ಷಕ : ಸಮನ್ವಯ ವಿಷಯದ ಕುರಿತು ಕಲಾವಿದರು ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 2.30ರಿಂದ ಸಮಾವೇಶದ ಸಮಾರೋಪ ಸಮಾರಂಭ ನಡೆಯಲಿದೆ. ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಾಲ್ಗೊಳ್ಳುವರು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-2099794858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.