ಉಡುಪಿ: ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಯಕ್ಷಗಾನ ಕಲಾರಂಗದ ಐವೈಸಿಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಮುಖವರ್ಣಿಕೆ ಶಿಬಿರವು ಶುಕ್ರವಾರ ಸಮಾರೋಪಗೊಂಡಿತು.

ಗುರು ಸಂಜೀವ ಸುವರ್ಣರ ನಿರ್ದೇಶನದಲ್ಲಿ ಪ್ರಸಾಧನ ತಜ್ಞ ಮಿಥುನ್ ನಾಯಕ್ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ.ಜಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯು. ವಿಶ್ವನಾಥ ಶೆಣೈ, ತಾರಾದೇವಿ ಭಾಗವಹಿಸಿದ್ದರು.

ಸಂಸ್ಥೆಯ ಸದಸ್ಯರಾದ ನಿರಂಜನ ಭಟ್, ಯು. ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ಎನ್. ರಾಮ ಭಟ್, ಪ್ರತಿಮಾ ಜೆ. ಆಚಾರ್ಯ, ರವಿರಾಜ್ ಎಚ್.ಪಿ., ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.

ಸಂಸ್ಥೆಯ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

ನಾಲ್ಕು ದಿನಗಳಲ್ಲಿ ಮಕ್ಕಳು ಸ್ವತಂತ್ರವಾಗಿ ವಿವಿಧ ವೇಷಗಳ ಮುಖವರ್ಣಿಕೆ, ಕಸೆ, ಗೆಜ್ಜೆ ಮತ್ತು ವೇಷಭೂಷಣ ಕಟ್ಟಿಕೊಳ್ಳುವುದನ್ನು ಕಲಿತುಕೊಂಡರು. ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಅಭ್ಯಾಸ ಮಾಡಲು ಪೂರಕವಾಗುವಂತೆ ಬಣ್ಣದ ಕಿಟ್ ವಿತರಿಸಲಾಯಿತು.

28 ಜನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-501597592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.