ಸೋಮವಾರ, ಫೆಬ್ರವರಿ 17, 2020
16 °C

ಋತು ಚಕ್ರ ಶುಚಿತ್ವ: ಕಿರುಚಿತ್ರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲಾ ಪಂಚಾಯತ್‍ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಮಂಗಳವಾರ ‘ಋತುಚಕ್ರದ ಶುಚಿತ್ವ ನಿರ್ವಹಣೆ’ ಕುರಿತ ಕಿರುಚಿತ್ರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಋತುಚಕ್ರದ ಶುಚಿತ್ವ ನಿರ್ವಹಣೆ ಅರಿವು ಮೂಡಿಸುವುದು ಪ್ರಮುಖ ಅಂಶವಾಗಿರುವ ಹಿನ್ನೆಲೆಯಲ್ಲಿ ಕಿರುಚಿತ್ರ ತಯಾರಿಸಲಾಗಿದೆ. ಋತುಚಕ್ರದ ಸಂದರ್ಭ ಶುಚಿತ್ವ ನಿರ್ವಹಣೆ ಹಾಗೂ ಬಳಸಿದ ಪ್ಯಾಡ್‍ಗಳ ಸುರಕ್ಷಿತ ವಿಲೇವಾರಿ ಬಗ್ಗೆ ಅರಿವು ಮೂಡಿಸಲು ಕಿರುಚಿತ್ರ ಸಿದ್ಧಪಡಿಸಲಾಗಿದೆ.

ರಾಜ್ಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿದ್ಧಪಡಿಸಿರುವ ಕಿರುಚಿತ್ರದ ಸಿಡಿಯನ್ನು ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ನೀಡಲಾಗುವುದು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು