ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಂಘಟಿತ ಕಾರ್ಮಿಕರಿಗೆ ಸವಲತ್ತುಗಳ ಮಾಹಿತಿ ಅಗತ್ಯ: ರಘು ಶ್ರೀನಿವಾಸ್ ಶೆಟ್ಟಿಗಾರ್

ಜಿಲ್ಲಾ ಗ್ಯಾರೇಜು ಮಾಲೀಕರ ಸಮಾವೇಶ, ಸಾಧಕರಿಗೆ ಸನ್ಮಾನ
Last Updated 20 ಮಾರ್ಚ್ 2023, 13:46 IST
ಅಕ್ಷರ ಗಾತ್ರ

ಉಡುಪಿ: ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಕೊರತೆ ಇದ್ದು ಸಂಘ ಸಂಸ್ಥೆಗಳು, ಸಂಘಟನೆಗಳು ಅರಿವು ಮೂಡಿಸುವ ಮೂಲಕ ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಮುಖಂಡರಾದ ರಘು ಶ್ರೀನಿವಾಸ್ ಶೆಟ್ಟಿಗಾರ್ ಹೇಳಿದರು.

ಉಡುಪಿಯ ಪುರಭವನದಲ್ಲಿ ಭಾನುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಗ್ಯಾರೇಜು ಮಾಲೀಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಮಾವೇಶ ಉದ್ಘಾಟಿಸಿ ಮಾತನಾಡಿ, ಜನಪ್ರತಿನಿಧಿಗಳು ಕಾರ್ಮಿಕ ವರ್ಗಗಳ ಸಮಸ್ಯೆಗಳನ್ನು ಆಲಿಸಿ ವಿಧಾನ ಮಂಡಲದಲ್ಲಿ ಧನಿ ಎತ್ತಿದಾಗ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತವೆ ಎಂದರು.

ಸಮಾವೇಶದಲ್ಲಿ ಹಲವು ನಿರ್ಣಯಗಳನ್ನು ಮಂಡಿಸಲಾಯಿತು. ಈಚೆಗೆ ನಿಧನರಾದ ಕಡಿಯಾಳಿಯ ದಾಮೋದರ್ ಶೆಟ್ಟಿಗಾರ್ ದೊಡ್ಡಣಗುಡ್ಡೆ ಇವರ ಕುಟುಂಬಕ್ಕೆ ಸಂಘದಿಂದ ಪರಿಹಾರ ಸಹಾಯಧನ ವಿತರಿಸಲಾಯಿತು.

ನಂದಳಿಕೆಯ ಅನ್ವಿತಾ ಪೂಜಾರಿ ಮತ್ತು ಕಟಪಾಡಿಯ ಸಾವನ್ ಕುಮಾರ್‌ಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾಜ ಸೇವಕರಾದ ಸಾಣೂರು ಅರುಣ್ ಶೆಟ್ಟಿಗಾರ್, ಸತೀಶ್ ಸುವರ್ಣ ಆದಿ ಉಡುಪಿ ಹಾಗೂ ಸಂಘದ ಹಿರಿಯ ಸದಸ್ಯರಾದ ಒಲಿವರ್ ಕೈರಾನ್ನಾ ಅವರನ್ನು ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಚೇರ್ಮನ್‌ ಪುಂಡಲೀಕ ಸುವರ್ಣ, ಅಧ್ಯಕ್ಷ ಕೇಶವ ಕಿಶೋರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ತಮಿಲ, ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ್ ಅತ್ತಾವರ್, ಉಡುಪಿ ಗ್ಯಾರೇಜ್ ಮಾಲೀಕರ ಸಂಘದ ಸ್ಥಾಪಕ ಅಧ್ಯಕ ಪ್ರಭಾಕರ್, ವಲಯ ಅಧ್ಯಕ್ಷರಾದ ನಾರಾಯಣ ಆಚಾರ್ ಕುಂದಾಪುರ, ಕೃಷ್ಣಯ್ಯ ಮುದ್ದೋಡಿ ಬೈಂದೂರು, ನಾರಾಯಣ್ ಪೂಜಾರಿ ಬ್ರಹ್ಮಾವರ, ಅಬ್ದುಲ್ ಮೊಯಿದ್ದೀನ್ ಕಾರ್ಕಳ, ಸಂತೋಷ್ ಕುಮಾರ್, ಪುತ್ತೂರು ವಲಯ ಅಧ್ಯಕ್ಷ ಸುರೇಶ್ ಸಾಲಿಯಾನ್, ಉಪಾಧ್ಯಕ್ಷರಾದ ರಾಜೇಶ್ ಜತ್ತನ್, ವಿನಯ್ ಕುಮಾರ್ ಕಲ್ಮಾಡಿ, ಗೌರವ ಸಲಹೆಗಾರ ವಿಲ್ಸನ್ ಅಂಚನ್, ಯಾದವ್ ಶೆಟ್ಟಿಗಾರ್, ಉದಯ ಕಿರಣ್, ಜಯ ಸುವರ್ಣ ಇದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಪ್ರಾಸ್ತವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ವಂದಿಸಿದರು, ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT