ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದ ಬುಲ್ಡೋಜರ್ ಅಸ್ತ್ರ ರಾಜ್ಯದಲ್ಲಿ ಪ್ರಯೋಗಿಸಲ್ಲ: ಆರಗ ಜ್ಞಾನೇಂದ್ರ

Last Updated 14 ಜೂನ್ 2022, 13:05 IST
ಅಕ್ಷರ ಗಾತ್ರ

ಉಡುಪಿ: ಉತ್ತರ ಪ್ರದೇಶ ಮಾದರಿಯಲ್ಲಿ ಬುಲ್ಡೋಜರ್‌ ಅಸ್ತ್ರವನ್ನು ಪ್ರಯೋಗಿಸುವಂತಹ ಪರಿಸ್ಥಿತಿ ರಾಜ್ಯದಲ್ಲಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕರ್ನಾಟಕದಲ್ಲಿ ಸಂವಿಧಾನ ಹಾಗೂ ಕಾನೂನುಗಳ ಪಾಲನೆ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯತೆ ಇಲ್ಲ ಎಂದರು.

ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧಿಗಳಾಗಿದ್ದರೆ ಶಿಕ್ಷೆಯಾಗುತ್ತದೆ. ಆದರೆ, ಕಾಂಗ್ರೆಸ್‌ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಅಡ್ಡಮಾರ್ಗ ಹಿಡಿದಿರುವ ಕಾರಣ ದೇಶದಿಂದಲೇ ನಾಪತ್ತೆಯಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ಎ.ಜಿ.ಕೊಡ್ಗಿ ರಾಜಕೀಯ ಮಾರ್ಗದರ್ಶಕರಾಗಿದ್ದರು. 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಪಂಚಾಯತ್ ರಾ‌ಜ್ ವ್ಯವಸ್ಥೆಗೆ ಬಲ ತುಂಬಿದವರು. ಅವರ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದರು.

ಪಿಎಫ್‌ಐ, ಸಿಎಫ್‌ಐ ಹಾಗೂ ಎಸ್‌ಡಿಪಿಐನಂತ ಮತಾಂಧ ಶಕ್ತಿಗಳನ್ನು ಮಟ್ಟಹಾಕಲು ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಮತಾಂಧ ಸಂಘಟನೆಗಳ ನಿಷೇಧಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಸಿಲ್ಲ. ಆದರೆ ಚಿಂತನೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT