ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 7.27 ಲಕ್ಷದವರೆಗೆ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ನಿರ್ಮಲಾ ಸೀತಾರಾಮನ್

Published 15 ಜುಲೈ 2023, 4:41 IST
Last Updated 15 ಜುಲೈ 2023, 4:41 IST
ಅಕ್ಷರ ಗಾತ್ರ

ಉಡುಪಿ: ಹೊಸ ಆದಾಯ ತೆರಿಗೆ ಪದ್ಧತಿಯ ಅಡಿಯಲ್ಲಿ ಸ್ಟ್ಯಾಂಡರ್ಡ್‌ ಡಿಡಕ್ಷನ್‌ಗೆ ಅವಕಾಶ ಕಲ್ಪಿಸಲಾಗಿದೆ, ₹7.27 ಲಕ್ಷದವರೆಗೂ ಆದಾಯ ತೆರಿಗೆ ಪಾವತಿಸುವ ಅಗತ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಮಣಿಪಾಲದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಬುದ್ಧರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡವರಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್‌ ಸೌಲಭ್ಯ ಇಲ್ಲ ಎಂಬ ಆಕ್ಷೇಪ ಇತ್ತು. ಆದರೆ ಈಗ ಆ ಸೌಲಭ್ಯವನ್ನು ಒದಗಿಸಲಾಗಿದೆ’ ಎಂದರು.

‘2013-14ರಲ್ಲಿ ಯುಪಿಎ ಸರ್ಕಾರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕಾ ವಲಯಕ್ಕೆ (ಎಂಎಸ್‌ಎಂಇ) ಬಜೆಟ್‌ನಲ್ಲಿ ನೀಡಿದ್ದು ಕೇವಲ ₹3,285 ಕೋಟಿ. ಆದರೆ, ಬಿಜೆಪಿ ಸರ್ಕಾರ 2023–24ನೇ ಸಾಲಿನಲ್ಲಿ ₹22,138 ಕೋಟಿ ಮೀಸಲಿಟ್ಟಿದೆ’ ಎಂದು ನಿರ್ಮಲಾ ಹೇಳಿದರು.

2023ರ ಕೇಂದ್ರ ಬಜೆಟ್‌ನಲ್ಲಿ ಎಂಎಸ್‌ಎಂಇಗೆ ಕ್ರೆಡಿಟ್‌ ಗ್ಯಾರಂಟಿ ಯೋಜನೆಯಡಿ ₹9,000 ಕೋಟಿ ಒದಗಿಸಲಾಗಿದೆ. ಪರಿಣಾಮ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲಿನ ಸಾಲದ ಹೊರೆ ಕಡಿಮೆಯಾಗಿದೆ. ಎಂಎಸ್‌ಎಂಇ ವಲಯ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೋವಿಡ್‌ ಕಾಲಘಟ್ಟದಲ್ಲಿ ಬಸವಳಿದಿದ್ದ ಕ್ಷೇತ್ರಕ್ಕೆ ಪುನಶ್ಚೇತನ ನೀಡಲಾಗುತ್ತಿದೆ ಎಂದರು.

ಉದ್ಯಮ್ ಯೋಜನೆ, ಪ್ರಧಾನಮಂತ್ರಿ ವ್ಯಾಪಾರಿ ಮಾನ್‌ಧನ್ ಯೋಜನೆ ಸಣ್ಣ ವ್ಯಾಪಾರಿಗಳಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ನೀಡುತ್ತಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT