ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಒತ್ತು: ಇಂಧನ ಸಚಿವ ವಿ.ಸುನಿಲ್ ಕುಮಾರ್

Last Updated 15 ಆಗಸ್ಟ್ 2021, 4:49 IST
ಅಕ್ಷರ ಗಾತ್ರ

ಉಡುಪಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುವ ಮೂಲಕ ಗ್ರಾಹಕರು, ರೈತರು ಹಾಗೂ ಉದ್ಯಮಿ ಸ್ನೇಹಿ ನೀತಿ ಜಾರಿಗೆ ಒತ್ತು ನೀಡಲಾಗುವುದು. ರಾಜ್ಯದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಇದುವರೆಗೂ ಪ್ರತ್ಯೇಕ ನೀತಿ ಇರಲಿಲ್ಲ. ಈ ಸಂಬಂಧ ಹಿರಿಯರ ರಚಿಸಿ ವರದಿ ಪಡೆದು ಶೀಘ್ರ ಪ್ರತ್ಯೇಕ ನೀತಿ ರಚನೆ ಮಾಡಲಾಗುವುದು. ಯಕ್ಷಗಾನಕ್ಕೆ ಒತ್ತು, ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ಯತ್ನ, ದಕ್ಷಿಣ ಕನ್ನಡ ಜಿಲ್ಲೆಯ ಉಬ್ಬರಡ್ಕ ಹಾಗೂ ಮಿತ್ತೂರು ಗ್ರಾಮಗಳನ್ನು ಪಾರಂಪರಿಕ ಗ್ರಾಮಗಳನ್ನಾಗಿ ಮಾಡುವುದು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ತೆಗೆದುಕೊಳ್ಳುವುದರ ಜತೆಗೆ ಭಾಷೆ ಮತ್ತು ಸಂಸ್ಕೃತಿಯನ್ನು ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು ಎಂದು ಘೋಷಿಸಿದರು.

250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ಕಟ್ಟಡ ನಿರ್ಮಾಣ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು, ಪಶ್ಚಿಮ ವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ, ಕಾರ್ಕಳ ಉಡುಪಿ ನಗರಕ್ಕೆ ಯುಜಿಡಿ ವ್ಯವಸ್ಥೆ, ವಾರಾಹಿ ನದಿಯಿಂದ ಜಿಲ್ಲೆಯ ಐದು ತಾಲ್ಲೂಕುಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT