ಕಾರ್ಕಳ: ‘ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿತ್ತು. ಇದೀಗ ರಸ್ತೆಯಲ್ಲಿ ಓಡಾಡುವವರಿಂದ ಸುಂಕ ವಸೂಲಾತಿಗೆ ಇಳಿದಿದೆ’ ಎಂದು ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.