ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಕೂಡಲೇ ಮಕ್ಕಳಿಗೆ ಲಸಿಕೆ: ಬೊಮ್ಮಾಯಿ

Last Updated 13 ಅಕ್ಟೋಬರ್ 2021, 9:11 IST
ಅಕ್ಷರ ಗಾತ್ರ

ಉಡುಪಿ: ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕಲು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಪ್ರಮಾಣಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲಸಿಕೆ ಹಾಕಲು ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಲಸಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಹಾಕುವಲ್ಲಿ ಶೇ 82ರಷ್ಟು ಸಾಧನೆಯಾಗಿದ್ದು, ಎರಡನೇ ಡೋಸ್ ಲಸಿಕೆಯಲ್ಲಿ ಶೇ 36ರಿಂದ 37 ರಷ್ಟು ಗುರಿ ಮುಟ್ಟಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಮೊದಲ ಡೋಸ್ ಹಾಗೂ ಶೇ 70ರಷ್ಟು ಎರಡನೇ ಡೋಸ್ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆಜಾರಿ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಬೇರೆ ರಾಜ್ಯಗಳಲ್ಲಿರುವ ಮತಾಂತರ ನಿಷೇಧ ಕಾನೂನುಗಳನ್ನು ಅಧ್ಯಯನ ಮಾಡಿ, ಕಾಯ್ದೆ ಜಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT