ಬುಧವಾರ, ಜುಲೈ 28, 2021
21 °C
ಕೋವಿಡ್ ಲಸಿಕಾ ಮಹಾಮೇಳ ಇಂದು

21 ಸಾವಿರ ಲಸಿಕೆ ಹಾಕಲು ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ಕೋವಿಡ್ ಲಸಿಕಾಕರಣದ ಮಹಾಮೇಳ ನಡೆಯಲಿದ್ದು 21,000 ಲಸಿಕೆ ಹಾಕಲಾಗುತ್ತಿದೆ. ಕೊರೊನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ನೀಡಲಾಗುವುದು.

ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾಕರಣದ ಮಹಾಮೇಳದ ಉದ್ಘಾಟನಾ ಕಾರ್ಯಕ್ರಮ ಹನುಮಂತನಗರದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 10.30ಕ್ಕೆ ಜರುಗಲಿದೆ.

ಉಡುಪಿ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡಿನಲ್ಲಿ (ಸೇಂಟ್ ಸಿಸಿಲಿ ಶಾಲೆ) ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ಕೋವಿಶೀಲ್ಡ್ 150 ಡೋಸ್ ಲಭ್ಯವಿದೆ. ಕೋವ್ಯಾಕ್ಸಿನ್ 100 ಡೋಸ್ ಲಭ್ಯವಿದೆ. ದೊಡ್ಡಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ ಕೋವಿಶೀಲ್ಡ್  550 ಡೋಸ್ ಸಿಗಲಿದೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ)ದಲ್ಲಿ  ಕೋವಿಶೀಲ್ಡ್ 300 ಡೋಸ್, ಕೋವ್ಯಾಕ್ಸಿನ್ 450 ಡೋಸ್,
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ (ಹನುಮಂತನಗರ) ಕೋವಿಶೀಲ್ಡ್ 300 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ,(ಖಾಸಗಿ ಪ್ರಾಥಮಿಕ ಶಾಲೆ ಆದಿ ಉಡುಪಿ) ಕೋವ್ಯಾಕ್ಸಿನ್ 200 ಡೋಸ್, ಎಫ್‌ಪಿಎಐ ಕುಕ್ಕಿಕಟ್ಟೆಯಲ್ಲಿ ಕೋವಿಶೀಲ್ಡ್ 150 ಡೋಸ್, ಕೋವ್ಯಾಕ್ಸಿನ್ 30 ಡೋಸ್ ಲಭ್ಯವಿದೆ.‌

ಉಡುಪಿಯ ತಾಯಿ ಮತ್ತು ಮಕ್ಕಳ ಸರ್ಕಾರಿ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಕೋವಿಶೀಲ್ಡ್ 350 ಡೋಸ್, 25ರೊಳಗೆ ವಿದೇಶ ಪ್ರಯಾಣ ಮಾಡುವವರು, ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯವಿದೆ.

ಲಸಿಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಶಿಬಿರದ ಸ್ಥಳ ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು. ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು