ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಂದೇ ಭಾರತ್ ರೈಲನ್ನು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಬೇಕಾದ ಅಗತ್ಯವನ್ನು ವಿವರಿಸಿದರು.

ಪ್ರತಿ ದಿನ ಉತ್ತರ ಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ಗಳು ಮತ್ತು ಇತರ ಖಾಸಗಿ ವಾಹನಗಳು ಬೆಂಗಳೂರು ತಲುಪುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.

ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.

ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದೊರಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಕೋಟ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.