ಸೋಮವಾರ, ಮೇ 17, 2021
21 °C
ಭಾರಿ ಸುದ್ದಿಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ವಾದ ಪ್ರತಿವಾದಗಳು ಪೂರ್ಣಗೊಂಡಿದ್ದು, ಮೇ 29ಕ್ಕೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ- ಮೇ 29ಕ್ಕೆ ಅಂತಿಮ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಭಾರಿ ಸುದ್ದಿಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ವಾದ ಪ್ರತಿವಾದಗಳು ಪೂರ್ಣಗೊಂಡಿದ್ದು, ಮೇ 29ಕ್ಕೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತಾರಾಮ್‌ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಆರೋಪಿಗಳ ಪರ ವಕೀಲರು ಪ್ರತಿವಾದ ಮಂಡಿಸಿದ್ದಾರೆ. ಸುಧೀರ್ಘ ಅವಧಿಯವರೆಗೂ ಪ್ರಕರಣದ ವಿಚಾರಣೆ ನಡೆಸಿದ್ದು, 78 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.

540 ಪುಟಗಳಷ್ಟು ಸಾಕ್ಷಿಗಳ ಹೇಳಿಕೆ ಇರುವುದರಿಂದ ಪರಿಶೀಲನೆಗೆ ಹೆಚ್ಚು ಸಮಯಾವಕಾಶ ಅಗತ್ಯವಿದ್ದು, ಮೇ 29ರಂದು ತೀರ್ಪು ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.

ಪ್ರಕರಣ: 2016ರ ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಹಾಗೂ ಮತ್ತೊಬ್ಬ ಆರೋಪಿ ರಾಘವೇಂದ್ರಗೆ ಜಾಮೀನು ದೊರೆತಿದೆ. ಪುತ್ರ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ್ ಭಟ್‌ ಜೈಲಿನಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು