ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ

Published 5 ಜೂನ್ 2024, 13:59 IST
Last Updated 5 ಜೂನ್ 2024, 13:59 IST
ಅಕ್ಷರ ಗಾತ್ರ

ಉಡುಪಿ: ಬಡಗುತಿಟ್ಟಿನ ಹಿರಿಯ ಕಲಾವಿದರಾದ ವೇಷ ಪೇತ್ರಿ ಮಾಧವ ನಾಯ್ಕ (84) ಪೇತ್ರಿಯ ಸ್ವಗೃಹದಲ್ಲಿ ಬುಧವಾರ ನಿಧನರಾದರು.

ಮಾರಣಕಟ್ಟೆ, ಮಂದಾರ್ತಿ, ಪೆರ್ಡೂರು, ಸಾಲಿಗ್ರಾಮ, ಅಮೃತೇಶ್ವರಿ, ಕೊಲ್ಲೂರು ಹಾಗೂ ಮುಲ್ಕಿ ಮೇಳಗಳಲ್ಲಿ 23 ವರ್ಷಗಳ ಕಾಲ ಮತ್ತು ಡಾ. ಶಿವರಾಮ ಕಾರಂತರ ನೇತೃತ್ವದ ಯಕ್ಷರಂಗದಲ್ಲಿ 30 ವರ್ಷ ವೇಷಧಾರಿಯಾಗಿ ಕಲಾ ಪ್ರತಿಭೆಯನ್ನು ಮೆರೆದಿದ್ದರು.

ಯಕ್ಷರಂಗದ ಪ್ರಮುಖ ವೇಷಧಾರಿಯಾಗಿ ವಿವಿಧ ದೇಶಗಳನ್ನು ಸಂಚರಿಸಿದ್ದರು.

ಮಾಧವ ನಾಯ್ಕರು ರಾವಣ, ಘಟೋತ್ಕಚ, ಹಿಡಿಂಭಾಸುರ, ತಾರಾಕಾಸುರ, ಶೂರ್ಪನಖಿ, ಹಿಡಿಂಬೆ, ಲಂಕಿಣಿ ಹೀಗೆ ಗಂಡು ಬಣ್ಣ ಮತ್ತು ಹೆಣ್ಣು ಬಣ್ಣ ಎರಡರಲ್ಲೂ ನೈಪುಣ್ಯತೆ ಹೊಂದಿದ್ದರು.

ಅವರಿಗೆ ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗದ ಹೀಗೆ ಹಲವು ಪ್ರಶಸ್ತಿಗಳು ಸಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT