ಶುಕ್ರವಾರ, ಜನವರಿ 22, 2021
20 °C

ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಗೆಲುವು: ಸಿ.ಎನ್. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಸ್ಕಿ ಹಾಗೂ ಬಸವಕಲ್ಯಾಣ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದರು. 

ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಮಂಗಳೂರಲ್ಲಿ ಲಷ್ಕರ್ ಉಗ್ರ ಸಂಘಟನೆ ಪರವಾಗಿ ಗೋಡೆ ಬರಹ ಬರೆದಿರುವುದು ದೇಶ ವಿರೋಧಿ ಚಟುವಟಿಕೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಡಿ.ಕೆ.ಶಿವಕುಮಾರ್ ಅವರನ್ನು ಸಿಬಿಐ ಟಾರ್ಗೆಟ್ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಸಂದರ್ಭವೂ ಸಿಬಿಐ ತನಿಖೆ ನಡೆದಿದ್ದು, ಕಾಂಗ್ರೆಸ್ ಸಿಬಿಐ ಅನ್ನು ದುರುಪಯೋಗ ಮಾಡಿಕೊಂಡಿದೆಯೇ ಎಂದು ಕೇಳಬೇಕಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು