ಉಡುಪಿ: ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣಾ ಕರ್ತವಕ್ಕೆ ನಿಯೋಜಿಸಿರುವ ಮೈಕ್ರೋ ಅಬ್ಸರ್ವರ್‌ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮತದಾನದ ದಿನ ಮತಗಟ್ಟೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಗಳ ಅನ್ವಯ ಮತದಾನ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಮೈಕ್ರೋ ಅಬ್ಸರ್ವರ್‌ಗಳು ಪರಿಶೀಲಿಸಬೇಕು. ಯಾವುದೇ ಲೋಪಗಳು ಕಂಡುಬಂದಲ್ಲಿ ಮತಗಟ್ಟೆ ಅಧಿಕಾರಿಯ ಗಮನಕ್ಕೆ ತಂದು ತಕ್ಷಣ ಸರಿಪಡಿಸಬೇಕು ಎಂದು ಸೂಚಿಸಿದರು.

ಮತದಾನ ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕು. ಮತದಾನದ ಪೂರ್ಣ ವಿವರಗಳನ್ನು ನೇರವಾಗಿ ಜಿಲ್ಲಾ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮತದಾನ ಆರಂಭದಿಂದ ಮುಕ್ತಾಯದವರೆಗಿನ ಎಲ್ಲ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ವರದಿಯನ್ನು ನಿಗದಿತ ಸಮೂನೆಯಲ್ಲಿ ದಾಖಲಿಸಿ ಚುನಾವಣಾ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿ 2,505 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದು, ಎಲ್ಲ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 4 ರವರೆಗೆ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ನೋಡೆಲ್ ಅಧಿಕಾರಿ ಅಶೋಕ್ ಕಾಮತ್ ಮೈಕ್ರೋ ಅಬ್ಸರ್ವರ್‌ಗಳು ನಿರ್ವಹಿಸಬೇಕಾದ ಕಾರ್ಯಗಳು ಹಾಗೂ ದಾಖಲೆಗಳನ್ನು ನಿರ್ವಹಿಸುವ ಕುರಿತು ತರಬೇತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿಂಜಾರ, ಎನ್.ಐ.ಸಿ. ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.