ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ 2,505 ಮತದಾರರು

27ರಂದು ಕಾಪು ಪುರಸಭೆ, 5 ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಉಪ ಚುನಾವಣೆ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್
Last Updated 4 ಡಿಸೆಂಬರ್ 2021, 15:17 IST
ಅಕ್ಷರ ಗಾತ್ರ

ಉಡುಪಿ: ಡಿ.10ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಶನಿವಾರ ಕಚೇರಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತಗಟ್ಟೆಗೆ ಒಬ್ಬರಂತೆ ತಲಾ 158 ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮೈಕ್ರೋ ಅಬ್ಸರ್‌ವರ್‌ಗಳು, ರೂಫ್ ಡಿ, ರೂಟ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆಗಳ ಕುರಿತು ತರಬೇತಿ ನೀಡಲಾಗಿದೆ ಎಂದರು.

ಜಿಲ್ಲೆಯ 2,505 ಮತದಾರರು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸುವ ಅರ್ಹತೆ ಪಡೆದಿದ್ದು, 2,387 ಗ್ರಾಮ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು ಸೇರಿ 40 ನಗರಸಭೆ ಸದಸ್ಯರು, 56 ಪುರಸಭೆ ಸದಸ್ಯರು, 19 ಪಟ್ಟಣ ಪಂಚಾಯಿತಿ ಸದಸ್ಯರು ಮತ ಚಲಾಯಿಸಲಿದ್ದಾರೆ ಎಂದರು.

ಡಿ.10ರಂದು ಬೆಳಿಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ ಹಾಗೂ 2 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. 7 ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನು ತೆರೆಯಲಾಗಿದ್ದು, ಡಿ.9ರಂದು ಮಸ್ಟರಿಂಗ್ ನಡೆಯಲಿದೆ.

ಮತದಾನದ ದಿನ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲಾಗುವುದು. ಚುನಾವಣಾ ಕಣದಲ್ಲಿ ಮೂವರು ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಉಪಸ್ಥಿತರಿದ್ದರು.

ಕಾಪು ಪುರಸಭೆ ಚುನಾವಣೆ 27ರಂದು

ಕಾಪು ಪುರಸಭೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು 23 ವಾರ್ಡ್‌ಗಳಿಗೆ ಡಿ.27ರಂದು ಚುನಾವಣೆ ನಡೆಯಲಿದೆ. ಡಿ.8ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, ಡಿ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 16ಕ್ಕೆ ನಾಮಪತ್ರಗಳ ಪರಿಶೀಲನೆ, 18 ನಾಮಪತ್ರಗಳ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಡಿ.27ರಂದು ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ 29ರಂದು ನಡೆಯಲಿದೆ. ಡಿ.30ರಂದು ಮತ ಎಣಿಕೆ ನಡೆಯಲಿದ್ದು ಅಂದೇ ಫಲಿತಾಂಶ ಹೊರಬೀಳಲಿದೆ.

ಗ್ರಾ.ಪಂ. ಉಪ ಚುನಾವಣೆ 27ರಂದು

ಜಿಲ್ಲೆಯ ಶಿರಿಯಾರ, ತೋನ್ಸೆ, ನಾಲ್ಕೂರು–2, ಕೋಟ, ಕೋಟೆ ಗ್ರಾಮ ಪಂಚಾಯಿತಿಗಳ 5 ಸದಸ್ಯ ಸ್ಥಾನಗಳಿಗೆ ಡಿ.27ರಂದು ಉಪ ಚುನಾವಣೆ ನಡೆಯಲಿದೆ. ಡಿ.13ರಂದು ಚುನಾವಣಾ ಅಧಿಸೂಚನೆ, 17ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 18ರಂದು ನಾಮಪತ್ರಗಳ ಪರಿಶೀಲನೆ, 20ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದು, 27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 30ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT