ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆರ್ಡೂರು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.