ಧಾರ್ಮಿಕ ಸಂವಿಧಾನ ಉಲ್ಲಂಘನೆ ಸರಿಯಲ್ಲ: ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಅಭಿಪ್ರಾಯ

7

ಧಾರ್ಮಿಕ ಸಂವಿಧಾನ ಉಲ್ಲಂಘನೆ ಸರಿಯಲ್ಲ: ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಅಭಿಪ್ರಾಯ

Published:
Updated:
Prajavani

ಉಡುಪಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಧಾರ್ಮಿಕ ಸಂವಿಧಾನವನ್ನು ಉಲ್ಲಂಘಿಸುವುದು ಸರಿಯಲ್ಲ ಎಂದು ಪರ್ಯಾಯ ‍ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಹೇಳಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ. ನಿರ್ಧಿಷ್ಟ ವಯೋಮಾನದ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ನಿಯಮಗಳಿವೆ. ಭಕ್ತಿಯಿಂದ ದೇವಸ್ಥಾನ ಪ್ರವೇಶಿಸಿದರೆ ತಪ್ಪಲ್ಲ, ಬಲಾತ್ಕಾರದಿಂದ ದೇವಸ್ಥಾನ ಪ್ರವೇಶಿಸಬಾರದು ಎಂದರು.

ಸರ್ಕಾರದ ಮಟ್ಟದಲ್ಲಿ ಕೆಲವೊಂದು ಶಿಷ್ಟಾಚಾರಗಳಿದ್ದು, ಅದನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಹಾಗೆಯೇ ಧರ್ಮಕ್ಷೇತ್ರಗಳಲ್ಲಿ ಧಾರ್ಮಿಕ ಸಂವಿಧಾನ ಅಸ್ತಿತ್ವದಲ್ಲಿದೆ. ತಲೆತಲಾಂತರಗಳಿಂದ ಆಚರಣೆಯಲ್ಲಿರುವ ಸಂಪ್ರದಾಯವನ್ನು ಉಲ್ಲಂಘಿಸುವುದು ಸರಿಯಲ್ಲ. ಸುಪ್ರೀಂಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. 

ಬರಹ ಇಷ್ಟವಾಯಿತೆ?

 • 12

  Happy
 • 1

  Amused
 • 0

  Sad
 • 0

  Frustrated
 • 7

  Angry

Comments:

0 comments

Write the first review for this !