ಸ್ವಸ್ಥ ಸಮಾಜ ನಿರ್ಮಾಣಕ್ಕೆ ವಿಶ್ವೇಶತೀರ್ಥ ಸ್ವಾಮೀಜಿ ಕರೆ

7
ವಿದ್ಯೋದಯ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ವಿಶ್ವೇಶತೀರ್ಥ ಸ್ವಾಮೀಜಿ ಕರೆ

Published:
Updated:
Deccan Herald

ಉಡುಪಿ: ಯುವ ಪೀಳಿಗೆಯ ಹೃದಯದಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರು ಪ್ರಯತ್ನಿಸಬೇಕು. ಆಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದರು.

ವಿದ್ಯೋದಯ ಟ್ರಸ್ಟ್‌ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಯುರೋಲಜಿ ವಿಭಾಗದ ಮುಖ್ಯಸ್ಥ ಡಾ.ಪದ್ಮರಾಜ್ ಹೆಗ್ಡೆ ಮಾತನಾಡಿ, ‘ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಈ ಸಮಯದ ಕಲಿಕೆ ಭವಿಷ್ಯವನ್ನು ನಿರ್ಧರಿಸುತ್ತದೆ. ವಿದ್ಯಾರ್ಥಿಗಳು ಭವ್ಯಭಾರತವನ್ನು ಬೆಳಗಿಸುವ ಕಾರ್ಯವನ್ನು ಮಾಡಬೇಕು. ಪ್ರತಿಯೊಬ್ಬರಲ್ಲೂ ಅಗಾಧ ಶಕ್ತಿ, ದೈವತ್ವ, ದ್ವೇಷದ ಅಂಶಗಳಿರುತ್ತವೆ. ಅವುಗಳಲ್ಲಿ ಸರಿಯಾದುದನ್ನು ಆಯ್ಕೆ ಮಾಡಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗಬೇಕು’ ಎಂದು ಹೇಳಿದರು.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಠ್ಯ-ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ‘ತೋರಣ’ ಲೋಕಾರ್ಪಣೆ ಮಾಡಲಾಯಿತು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಎನ್.ನಾಗರಾಜ ಬಲ್ಲಾಳ್‌, ಪ್ರಾಂಶುಪಾಲ ಎ.ಲಕ್ಷ್ಮೀನಾರಾಯಣ ಛಾತ್ರ, ಉಪ ಪ್ರಾಂಶುಪಾಲೆ ಕೆ.ರಂಜನಾ, ವಿದ್ಯೋದಯ ಟ್ರಸ್ಟ್‌ನ ಕಾರ್ಯದರ್ಶಿ ಕೆ. ಗಣೇಶ್ ರಾವ್ ಉಪಸ್ಥಿತರಿದ್ದರು. ಆದಿತ್ಯ ರತ್ನಾಕರ ಸ್ವಾಗತಿಸಿದರು. ಶ್ವೇತಾ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !