ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೃಷ್ಣಮಠದಲ್ಲಿ ‘ವಿಶ್ವಾರ್ಪಣಮ್‌’ ಡಿ.5ರಿಂದ 26ರವರೆಗೆ

ಪರ್ಯಾಯ ಅವಧಿಯ ದೀಕ್ಷಾ ಸಮಾಪನ ಕಾರ್ಯಕ್ರಮ
Last Updated 26 ನವೆಂಬರ್ 2021, 15:34 IST
ಅಕ್ಷರ ಗಾತ್ರ

ಉಡುಪಿ: ಡಿ.5ರಿಂದ 26ರವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ ‘ವಿಶ್ವಾರ್ಪಣಮ್‌’ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಗಣ್ಯರು, ವಿದ್ವಾಂಸರು, ವಾಗ್ಮಿಗಳು ಭಾಗವಹಿಸಲಿದ್ದಾರೆ ಎಂದು ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾ‌ಜ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.5ರಂದು ಸಂಜೆ 4ಕ್ಕೆ ‘ವಿಶ್ವಾರ್ಪಣಮ್‌’ ಉದ್ಘಾಟನೆಯಾಗಲಿದ್ದು ಅದಮಾರು ಮಠದ ವಿಶ್ವಪ್ರಿಯ ತೀರ್ಥರು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಈಶಪ್ರಿಯ ತೀರ್ಥರು, ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ. ಶಾಸಕ ರಘುಪತಿ ಭಟ್‌, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕೆನರಾ ಬ್ಯಾಂಕ್‌ ಕಾರ್ಯ ನಿರ್ವಾಹಕ ನಿರ್ದೇಶಕ ಮಣಿಮೇಖಲೈ, ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕರಾದ ಎಂ.ಎಸ್‌.ಮಹಾಬಲೇಶ್ವರ, ನಟ, ಚಿಂತಕ ಎಸ್‌.ಎನ್‌.ಸೇತುರಾಂ ಉಪಸ್ಥಿತರಿರಲಿದ್ದಾರೆ ಎಂದು ವಿವರ ನೀಡಿದರು.

6ರಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದು, ಚಿಂತಕ ಚಕ್ರವರ್ತಿ ಸೂಲಿಬೆಲೆ ಹಿಂದೂ ಅಸ್ಮಿತೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಟೀಲು ಶ್ರೀಕ್ಷೇತ್ರದ ಅನುವಂಶಿಕ ಮೊಕ್ತೇಸರ ಹಾಗೂ ಅರ್ಚಕ ವಾಸುದೇವ ಆಸ್ರಣ್ಣ, ಅರ್ಚಕ ವೆಂಕಟರಮಣ ಆಸ್ರಣ್ಣ, ಕೊಡೆತ್ತೂರು ಗುತ್ತು ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.

ಪ್ರತಿದಿನ ಸಂಜೆ ಯತಿಗಳು, ಚಿಂತಕರು, ಶಿಕ್ಷಣ ತಜ್ಞರು, ಆಧ್ಯಾತ್ಮ ಸಾಧಕರಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಗುವುದು. ಪ್ರತಿದಿನ ರಾತ್ರಿ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಿಂದೂಸ್ತಾನಿ ಸಂಗೀತ, ಭರತ ನಾಟ್ಯ, ವೀಣೆ, ಪಿಟೀಲು ವಾದನ, ಯಕ್ಷಗಾನ ಪ್ರದರ್ಶನ ಇರಲಿದೆ.

ಡಿ.12ರಿಂದ 14ರವರೆಗೆ ರಾಜ್ಯಮಟ್ಟದ ದೇಶಿ ಗೋಪಾಲಕರ, ಕೃಷಿಕರ ಹಾಗೂ ಗೋ ಉತ್ಪನ್ನ ತಯಾರಕರ ಸಮ್ಮೇಳನ ನಡೆಯಲಿದ್ದು, ಗೋ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ, ಉಪಯೋಗಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.

ವಿಶ್ವಾರ್ಪಣಮ್‌ ಸಮಾರೋಪದ ದಿನವಾದ 26ರಂದು ಅಷ್ಠಮಠಗಳ ಯತಿಗಳು ಉಪಸ್ಥಿತರಿದ್ದು ಅನುಗ್ರಹ ಸಂದೇಶ ನೀಡಲಿದ್ದಾರೆ. ಅಂದು ಅದಮಾರು ಮಠದಿಂದ ಕೊಡಮಾಡುವ 2ನೇ ವರ್ಷದ ಯಕ್ಷಗಾನ ಕಲಾ ಪ್ರಶಸ್ತಿ ನರಹರಿ ತೀರ್ಥ ಪ್ರಶಸ್ತಿಯನ್ನು ಶ್ರೀಪಾದ ತಿಮ್ಮಣ್ಣ ಭಟ್ಟ ಸಾಲ್ಕೋಡು ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶ್ರೀಶ ಭಟ್ ಕಡೆಕಾರ್, ಕೃಷ್ಣರಾವ್ ಕುತ್ಪಾಡಿ, ಪ್ರದೀಪ್ ರಾವ್, ರೋಹಿತ್ ತಂತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT