ಗುರುವಾರ , ಆಗಸ್ಟ್ 18, 2022
25 °C

ಕಾರ್ಕಳ: ‘ವಿವೇಕಾನಂದರ ಚಿಂತನೆ ಸಾರ್ವಕಾಲಿಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಕಳ: ಇಡೀ ವಿಶ್ವವೇ ಭಾರತದ ಕಡೆ ತಿರುಗುವಂತೆ ಮಾಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಅವರು ಮನುಕುಲಕ್ಕೆ ನೀಡಿದ ಸಂದೇಶ ಸಾರ್ವಕಾಲಿಕವಾದುದು ಎಂದು ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.

ತಾಲ್ಲೂಕಿನ ಕುಕ್ಕುಂದೂರು ಗಣಿತ ನಗರದ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಮೌಲ್ಯ ಸುಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರಪಿತ ಗಾಂಧೀಜಿ ಕೂಡಾ ಸ್ವಾಮಿ ವಿವೇಕಾನಂದರಿಂದ ಪ್ರಭಾವಿತರಾಗಿದ್ದರು. ಅಲ್ಲದೇ ಅವರ ಪುಸ್ತಕಗಳನ್ನು ಓದಿ ತನ್ನ ದೇಶಪ್ರೇಮವು ಇಮ್ಮಡಿಗೊಂಡಿತು ಎಂದು ಹೇಳಿಕೊಂಡಿದ್ದರು. ಮುಂದೆ ಗಾಂಧೀ ವಿಶ್ವಮಟ್ಟದ ನಾಯಕನಾಗಿ ಬೆಳೆದುದರ ಹಿಂದೆ ವಿವೇಕಾನಂದರ ಜೀವನಾದರ್ಶಗಳು ಪ್ರಭಾವ ಬೀರಿವೆ ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಕಮಲಾಕ್ಷ ನಾಯಕ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು. ಇದ್ದರು. ಉಪನ್ಯಾಸಕ ಸಂತೋಷ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.