ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯಡಕ: ಸ್ಪರ್ಧೆಯ ಅಂತಿಮ ಸುತ್ತಿಗೆ 15 ಜನರು ಆಯ್ಕೆ

ವಾಯ್ಸ್ ಆಫ್ ಚಾಣಕ್ಯ-–2022 ಸೀಸನ್-–5
Last Updated 27 ನವೆಂಬರ್ 2022, 2:53 IST
ಅಕ್ಷರ ಗಾತ್ರ

ಹಿರಿಯಡಕ: ಉದಯಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್, ಹಿರಿಯಡಕ ರೈತರ ಸಹಕಾರಿ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಹೆಬ್ರಿ ಚಾಣಕ್ಯ ಎಜುಕೇಷನ್ ಹಾಗೂ ಕಲ್ಚರಲ್ ಅಕಾಡೆಮಿಯ ಅಂಗ ಸಂಸ್ಥೆ ಚಾಣಕ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಶ್ರಯದಲ್ಲಿ ‘ವಾಯ್ಸ್ ಆಫ್ ಚಾಣಕ್ಯ-2022 ಸೀಸನ್-5’ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆಯ ಸೆಮಿ ಫೈನಲ್ ಶನಿವಾರ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ನಡೆಯಿತು.

ಹಿರಿಯಡಕ ರೈತರ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಗೆ ಅನೇಕ ವೇದಿಕೆಗಳು ದೊರೆಯುತ್ತಿವೆ. ವಿದ್ಯಾರ್ಥಿಗಳು ಕೇವಲ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಹೆಬ್ರಿಯ ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಉದಯಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಸಂಗೀತ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ವಿವಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ವಾಯ್ಸ್ ಆಫ್ ಚಾಣಕ್ಯ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆಯನ್ನು ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿದೆ ಎಂದರು.

ಕಾಲೇಜು ಪ್ರಾಂಶುಪಾಲೆ ಡಾ.ಸೀಮಾ ಜಿ.ಕೆ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲು, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯಕ್, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ಅಧ್ಯಕ್ಷ ಶಾಂತರಾಮ ಸೂಡ, ಹಿರಿಯಡಕ ರೈತರ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಹಿರಿಯಡಕ ಸಿದ್ಧಿವಿನಾಯಕ ಮೆಡಿಕಲ್ ಮಾಲೀಕ ಶಕ್ತಿ ಪ್ರಸಾದ್ ಶೆಣೈ, ಕನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಮಂಜುನಾಥ ಭಟ್, ಕುಂಬಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್, ಹೆಬ್ರಿ ಕ್ಯಾಂಪ್ಕೊ ಶಾಖಾಧಿಕಾರಿ ರಮೇಶ್ ಡಿ.ಚಾಂತಾರು, ಸಂಗೀತ ಶಿಕ್ಷಕಿ ಸ್ಮಿತಾ ಭಟ್ ಉಡುಪಿ ಇದ್ದರು.

ಕಾಲೇಜಿನ ಉಪನ್ಯಾಸಕ ರವಿಚಂದ್ರ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಆಡಿಷನ್‌ನಲ್ಲಿ 82 ಜನ ಆಯ್ಕೆಯಾಗಿದ್ದು, ಅದರಲ್ಲಿ 32 ಜನ ಸೆಮಿಫೈನಲ್ಸ್‌ಗೆ ಆಯ್ಕೆಯಾಗಿದ್ದರು.

ಅಂತಿಮ ಸುತ್ತಿಗೆ 15 ಜನ ಗಾಯಕರು ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT