ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗ ಸೇವಾ ಸಂಘದಿಂದ ಶೀಘ್ರ ’ಸತ್ಸಂಗ’–ಬಿ.ಎಂ.ಸುರೇಶ್‌

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್‌ ಭೇಟಿ, ಮನವಿ
Last Updated 26 ಸೆಪ್ಟೆಂಬರ್ 2021, 17:07 IST
ಅಕ್ಷರ ಗಾತ್ರ

ಉಡುಪಿ: ಅಜ್ಜರಕಾಡು ಪುರಭವನದ ಸಭಾಂಗಣದಲ್ಲಿ ಈಚೆಗೆ ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಕಾರ್ಯಕಾರಿಣಿ ಸಭೆ ನಡೆಯಿತು. ಸಮಾಜದ ಬೆಳವಣಿಗೆ ಹಾಗೂ ಭವಿಷ್ಯದ ಕಾರ್ಯಕ್ರಮಗಳ ಕುರಿತು ಜಿಲ್ಲಾ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಬಿ.ಎಂ.ಸುರೇಶ್‌ ಹಲವು ವಿಚಾರಗಳನ್ನು ಸಭೆಯಲ್ಲಿ ಮಂಡಿಸಿದರು.

ಬಳಿಕ ಮಾತನಾಡಿದ ಅವರು, ಈಚೆಗೆ ಬೆಂಗಳೂರಿನಲ್ಲಿ ಆದಿ ಚುಂಚನಗಿರಿ ಮಠದ ಪೀಠಾಧಿಪತಿಗಳಾದ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ, ಉಡುಪಿಯಲ್ಲಿ ಒಕ್ಕಲಿಗ ಸೇವಾ ಸಂಘದ ಕಚೇರಿಗೆ ನಿವೇಶನ ಪಡೆಯುವ ವಿಚಾರವನ್ನು ಪ್ರಸ್ತಾಪಿಸಲಾಯಿತು. ಜಿಲ್ಲೆಯಲ್ಲಿ ಸಂಘದ ಬೆಳವಣಿಗೆಗೆ ಪೂರಕವಾಗಿ ಹಲವು ವಿಚಾರಗಳನ್ನು ಸ್ವಾಮೀಜಿ ಗಮನಕ್ಕೆ ತರಲಾಯಿತು ಎಂದು ತಿಳಿಸಿದರು.

ಒಕ್ಕಲಿಗರ ಸೇವಾ ಸಂಘಕ್ಕೆ ಉಡುಪಿ ಅಥವಾ ಮಣಿಪಾಲದಲ್ಲಿ ಅರ್ಧ ಎಕರೆ ಸರ್ಕಾರಿ ಅಥವಾ ಖಾಸಗಿ ಜಾಗವನ್ನು ಹುಡುಕುವಂತೆ ಸ್ವಾಮೀಜಿ ನಿರ್ದೇಶನ ನೀಡಿದರು ಎಂದು ಸುರೇಶ್ ತಿಳಿಸಿದರು.

ಕೋವಿಡ್‌ ಪೂರ್ವದಲ್ಲಿ ಉಡುಪಿಯಲ್ಲಿ ಒಕ್ಕಲಿಗರ ಸೇವಾ ಸಂಘದಿಂದ ಪಾಂಚಜನ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬಳಿಕ ಕಾರ್ಯಕ್ರಮಗಳು ನಡೆದಿಲ್ಲ. ಸಮುದಾಯದ ಅಸ್ತಿತ್ವವನ್ನು ರಾಜ್ಯ ಮಟ್ಟದಲ್ಲಿ ಪ್ರಚುರಪಡಿಸಲು ಶೀಘ್ರದಲ್ಲೇ ‘ಸತ್ಸಂಗ’ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಕರೆಸಲು ಸರ್ವಾನುಮತದಿಂದ ತೀರ್ಮಾನಿಸಿ, ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಈ ಸಂಬಂಧ ಜನ ಜಾಗೃತಿ ಮೂಡಿಸಲು ಸದಸ್ಯತ್ವ ಅಭಿಯಾನ ಆರಂಭಿಸಲು ನಿರ್ಧರಿಸಲಾಯಿತು ಎಂದು ಎಂದು ಅಧ್ಯಕ್ಷರಾದ ಸುರೇಶ್ ತಿಳಿಸಿದರು.

ಉಡುಪಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಮಂಜುನಾಥ್, ಸದಸ್ಯರಾದ ರಘುನಂದನ್, ಕೃಷ್ಣ ಹಾಗೂ ವೆಂಕಟೇಶ್ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT