ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡಿ: ಮನೋಜ್ ಜೈನ್

Last Updated 6 ಡಿಸೆಂಬರ್ 2022, 15:45 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕಳೆದ ನವೆಂಬರ್‌ನಿಂದ ಪ್ರಾರಂಭವಾಗಿದೆ.

ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ. ಮತದಾರರ ಸೇರ್ಪಡೆಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇರುವಿಕೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಿಸಲು ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದರ ಮೇಲುಸ್ತುವಾರಿಯನ್ನು ಉನ್ನತ ಮಟ್ಟದ ಅಧಿಕಾರಿಗಳು ವಹಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಜೋಡಣೆ ಶೇ85.64 ರಷ್ಟು ಪೂರ್ಣಗೊಂಡಿದೆ ಎಂದರು.

ಯುವ ಸಮುದಾಯಕ್ಕೆ ಮತದಾನದ ಜಾಗೃತಿ ಮೂಡಿಸಬೇಕು. ವ್ಯವಸ್ಥಿತವಾದ ಮಾಹಿತಿಯ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕು. ಹೆಚ್ಚು ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ ವಿಶೇಷ ಚೇತನರನ್ನು ಗುರುತಿಸಿ ಅವರಿಗೆ ಮತದಾನ ಮಾಡಲು ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಪ್ರಸನ್ನ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT