ಕಸದ ಸಮಸ್ಯೆಗೆ ಎಂಆರ್ಎಫ್ ಘಟಕ ಪರಿಹಾರ

ಉಡುಪಿ: ಗ್ರಾಮ ಪಂಚಾಯಿತಿಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂಆರ್ಎಫ್
ಘಟಕ ಸೂಕ್ತ ಪರಿಹಾರ ನೀಡಬಲ್ಲದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು.
ಬಡಗಬೆಟ್ಟು ಗ್ರಾಮ ಪಂಚಾಯಿತಿಯ ನೇತಾಜಿ ನಗರದಲ್ಲಿ ಮಿನಿ ಎಂಆರ್ಎಫ್ ಕೇಂದ್ರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ, ಮಲತ್ಯಾಜ್ಯ ನಿರ್ವಹಣಾ ಘಟಕ, ಬೂದು ನೀರು ನಿರ್ವಹಣಾ ಕಾಮಗಾರಿ ಹಾಗೂ ಶಾಂತಿ ನಗರದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತಾನಾಡಿದರು.
ಇಚ್ಚಾಶಕ್ತಿ ಇದ್ದರೆ ಕಸವನ್ನು ಸಹ ಆದಾಯದ ಮೂಲವನ್ನಾಗಿ ಮಾಡಬಹುದು ಎಂಬುದಕ್ಕೆ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಎಂಆರ್ಎಫ್ ಘಟಕಗಳು ಸಾಕ್ಷಿ. ಎಲ್ಲ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಬೇಕು ಎಂದರು.
ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಬಡಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಧವಿ ಎಸ್.ಆಚಾರ್ಯ, ಉಪಾಧ್ಯಕ್ಷೆ ನಿರುಪಮಾ ಹೆಗ್ಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಪ್ರಸನ್ನ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಉಡುಪಿ ತಾಲ್ಲೂಕು ಪಂಚಾಯತ್ ಇಒ ವಿಜಯ, ಪಿಡಿಒ ಅಶೋಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಇದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಸ್ವಾಗತಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.