ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಐಎ ಕೇಂದ್ರ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವ: ತೇಜಸ್ವಿ ಸೂರ್ಯ

Last Updated 22 ನವೆಂಬರ್ 2022, 11:34 IST
ಅಕ್ಷರ ಗಾತ್ರ

ಉಡುಪಿ: ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ತಡೆಗೆ ಎನ್‌ಐಎ ಕೇಂದ್ರದ ಅಗತ್ಯವಿದ್ದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ಮಂಗಳವಾರ ಮಣಿಪಾಲದ ಕಂಟ್ರಿ ಇನ್‌ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿ, ಕರಾವಳಿಯು ವಿಚ್ಛಿದ್ರಕಾರಿ ಶಕ್ತಿಗಳ ಕೇಂದ್ರವಾಗುತ್ತಿದ್ದು, ಎನ್‌ಐಎ ಕೇಂದ್ರ ಸ್ಥಾಪನೆ ಸಂಬಂಧ ಅಮಿತ್ ಶಾ ಅವರ ಬಳಿ ಮಾತನಾಡುತ್ತೇನೆ. ಪೊಲೀಸ್ ಇಲಾಖೆ, ಇಂಟೆಲಿಜೆನ್ಸ್‌ ಹಾಗೂ ಎನ್‌ಐಎ ಜೊತೆಯಾಗಿ ಕೆಲಸ ಮಾಡಿದರೆ ಭಯೋತ್ಪಾದನಾ ಚಟುವಟಿಕೆಗಳಿಗೆ ಬ್ರೇಕ್ ಹಾಕಬಹುದು ಎಂದರು.

‘ಆರ್ಥಿಕ ಶಕ್ತಿ ಕೇಂದ್ರವಾಗಿರುವ ಕರಾವಳಿಯಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯದಲ್ಲಿ ಪಿಎಫ್‌ಐ ನಿಷೇಧಿಸದಂತೆ ಭಯೋತ್ಪದಕರ ಬೇರನ್ನು ಕಿತ್ತೆಸೆಯುವವರೆಗೂ ವಿರಮಿಸುವುದಿಲ್ಲ. ರಾಜ್ಯದ ಜನರ ಜೀವ ಕಾಪಾಡುವುದು ಸರ್ಕಾರದ ಕರ್ತವ್ಯ. ಬಿಜೆಪಿ ಮತಬ್ಯಾಂಕ್ ರಾಜಕಾರಣ ಮಾಡುವುದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT