ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರದಲ್ಲಿ ಸುಸಜ್ಜಿತ ಜಿಮ್, ಈಜುಕೊಳ: ಸಚಿವ ನಾರಾಯಣ ಗೌಡ

Last Updated 26 ಫೆಬ್ರುವರಿ 2021, 15:15 IST
ಅಕ್ಷರ ಗಾತ್ರ

ಉಡುಪಿ: ಶಾಸಕರ ಪ್ರದೇಶಾಭಿವೃದ್ಧಿ ಅನುದಾನವನ್ನು ಸಂಪೂರ್ಣವಾಗಿ ಬಳಸಿ, ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ನಾರಾಯಣ ಗೌಡ ಹೇಳಿದರು.

ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯಡಿಯಲ್ಲಿ ನೀಡುವ ಅನುದಾನ ನಿಗಧಿತ ಅವಧಿಯೊಳಗೆ ವೆಚ್ಚವಾಗದಿದ್ದರೆ ಹೊಸ ಅನುದಾನ ಪಡೆಯಲು ಸಾಧ್ಯವಿಲ್ಲ. ಎಲ್ಲ ಶಾಸಕರು ಕ್ರಿಯಾ ಯೋಜನೆ ಪಡೆದು, ಕಾಲಮಿತಿಯಲ್ಲಿ ಯೋಜನೆ ಮುಕ್ತಾಯಗೊಳಿಸಿ ಅನುದಾನ ವೆಚ್ಚ ಮಾಡಬೇಕು ಎಂದರು.

ಹಲವು ಜಿಲ್ಲೆಗಳಲ್ಲಿ ಶಾಸಕರ ಪ್ರದೇಶಾಭಿವೃಧ್ದಿ ಯೋಜನೆಯ ಅನುದಾನವನ್ನು ಪೂರ್ಣವಾಗಿ ಬಳಸದಿರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಅಡ್ಡಿಯಾಗಿದೆ. ಉಡುಪಿ ಜಿಲ್ಲೆಯು ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಪ್ರಸ್ತುತ ಸಾಲಿನಲ್ಲಿ ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ಗೆ ಸಚಿವರು ತಿಳಿಸಿದರು.

ಎಲ್ಲ ತಾಲ್ಲೂಕು ಕ್ರೀಡಾಂಗಣಗಳ ಅಭಿವೃದ್ಧಿಗೆ ಸಂಬಂಧಪಟ್ಟ ಶಾಸಕರು ಪ್ರಸ್ತಾವ ಸಲ್ಲಿಸಿ. ಕುಂದಾಪುರದಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಉಡುಪಿ ಬ್ಯಾಡ್ಮಿಂಟನ್‌ ಕೋರ್ಟ್ ವಿಸ್ತರಣೆ ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಪದವಿವರೆಗೆ ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಕ್ರೀಡಾಂಗಣಗಳ ನಿರ್ಮಾಣ ಮತ್ತು ವಿಸ್ತರಣೆ ಸಂದರ್ಭ ಕ್ರೀಡಾಪಟುಗಳಿಗೆ ಸುಸಜ್ಜಿತ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT