ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ಕರ್ಣೆ: ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆ ಮಾಹಿತಿ

Last Updated 8 ಸೆಪ್ಟೆಂಬರ್ 2022, 5:39 IST
ಅಕ್ಷರ ಗಾತ್ರ

ಕೊಕ್ಕರ್ಣೆ (ಬ್ರಹ್ಮಾವರ): ಘನ ಹಾಗೂ ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿ. ಅದರ ನಿರ್ವಹಣೆಗೆ ವಿಶೇಷ ಕಾರ್ಯಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆದಿರುವ ಉಡುಪಿ ಜಿಲ್ಲೆಯು ಇದೀಗ ದ್ರವ ತ್ಯಾಜ್ಯದ ಸರಿಯಾದ ನಿರ್ವಹಣೆ ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಕೊಕ್ಕರ್ಣೆ ಸಮೂಹ ಸಂಪನ್ಮೂಲ ಶಿಕ್ಷಕಿ ದೀಪಾ ಶೆಟ್ಟಿ ತಿಳಿಸಿದರು.

ದ್ರವ ತ್ಯಾಜ್ಯ ನಿರ್ವಹಣೆ ಕುರಿತುಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಡೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ, ಮಾಹಿತಿ ನೀಡಿ, ‘ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ಮಕ್ಕಳಿಗೆ ಮಾಹಿತಿ ನೀಡಲಾಗುತ್ತಿದೆ.
ದ್ರವ ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ನಮ್ಮ ಹಿರಿಯರು ಕಾಬಾಳೆ, ಕೈತೋಟ, ಕೆಸು ನೆಡುವಿಕೆಯಂತಹ ನಿಸರ್ಗ ಸ್ನೇಹಿ ಮಾದರಿಗಳನ್ನು ನೀಡಿದ್ದು. ಇಂಗುಗುಂಡಿಗಳ ನಿರ್ಮಾಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯವಿದೆ ಎಂದರು.

ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕಿ ಕುಸುಮಮಾ, ಶಾಲಾ ಶಿಕ್ಷಕರಾದ ಭಾಸ್ಕರ ಪೂಜಾರಿ, ಗುಲಾಬಿ, ಆಶಾಕಿರಣ, ಪ್ರಭಾ, ಅತಿಥಿ ಶಿಕ್ಷಕರಾದ ಯಶೋದಾ, ರೇಷ್ಮಾ, ಮಾಲತಿ, ಉಷಾ, ಕಾಡೂರು ಗ್ರಾಮ ಪಂಚಾಯಿತಿ ಸಿಬ್ಬಂದಿ ಶಿವರಾಮ, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT