ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ಮತ ಚಲಾಯಿಸಿ ಮೃತಪಟ್ಟ ವೃದ್ಧೆ

Published 17 ಏಪ್ರಿಲ್ 2024, 6:26 IST
Last Updated 17 ಏಪ್ರಿಲ್ 2024, 6:26 IST
ಅಕ್ಷರ ಗಾತ್ರ

ಬ್ರಹ್ಮಾವರ: ಆರೋಗ್ಯ ಹದಗೆಟ್ಟಿದ್ದರೂ ಮತದಾನ ಮಾಡಿಯೇ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ 83 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಸಾಸ್ತಾನ- ಪಾಂಡೇಶ್ವರ ಚಡಗರ ಅಗ್ರಹಾರದ ಶ್ಯಾನುಭೋಗರ ಮನೆಯ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯಾಯರ ಪತ್ನಿ ಪಿ.ಯಶೋದಾ ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನಹೊಂದಿದರು. ಇವರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ.

ತೀವ್ರ ಅನಾರೋಗ್ಯ ಕಾಡುತ್ತಿದ್ದ ಯಶೋದಾ ಅವರಿಗೆ ಸೋಮವಾರ ಮನೆಯಲ್ಲಿಯೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯ ಹದಗೆಟ್ಟಿದ್ದರೂ, ಮತ ಹಾಕಿಯೇ ಆಸ್ಪತ್ರೆಗೆ ಹೋಗುವುದಾಗಿ ಪಟ್ಟುಹಿಡಿದ ಅವರು ಮಧ್ಯಾಹ್ನ ಮತ ಚಲಾಯಿಸಿ ಬಳಿಕ ಆಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT