‘ಕಾನೂನು ಕೈಗೆತ್ತಿಕೊಂಡರೆ ಸಹಿಸಲಾಗದು’
‘ಮಹಿಳೆಯೊಬ್ಬರಿಗೆ ಥಳಿಸಿದ ವೀಡಿಯೊ ಕಂಡು ದಿಗ್ಭ್ರಮೆಯಾಯಿತು. ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ವೇದಿಕೆಯಲ್ಲಿ ಹೇಳಿದ್ದಾರೆ.