ಉಡುಪಿ: ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವನದಲ್ಲಿ ಮುನ್ನುಗ್ಗಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಭಂಡಾರಿ ಹೇಳಿದರು.

ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ. ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ, ಮಹಿಳೆಯರು ಈಗ ಅಬಲೆಯರಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಮೃತ ಕೃಷ್ಣಮೂರ್ತಿ, ಅರುಣಾಕಲ, ಅನಿತಾ ಬಾಳಿಗ, ಡಾ. ಕಾಂತಿ ಹರೀಶ್, ಡಾ. ಅರ್ಚನಾ ಎಂ.ವಿ., ಡಾ. ಶ್ರುತಿ ಬಲ್ಲಾಳ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಸಿಒಒ ಡಾ. ಗೌರಿ ಪ್ರಭು ಇದ್ದರು. ಶ್ರಾವ್ಯ ಸಂಗಡಿಗರು ಪ್ರಾರ್ಥಿಸಿದರು. ಮಾಧವ ಪೂಜಾರಿ ಸ್ವಾಗತಿಸಿದರು. ಚರಣರಾಜ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.