ದಕ್ಷಿಣ ವಲಯ ಅಂತರ ವಿ.ವಿಮಟ್ಟದ ಮಹಿಳೆಯರ ಕೊಕ್ಕೊ ಪಂದ್ಯಾವಳಿ 15ರಿಂದ

7

ದಕ್ಷಿಣ ವಲಯ ಅಂತರ ವಿ.ವಿಮಟ್ಟದ ಮಹಿಳೆಯರ ಕೊಕ್ಕೊ ಪಂದ್ಯಾವಳಿ 15ರಿಂದ

Published:
Updated:

ಉಡುಪಿ: ಅಜ್ಜರಕಾಡು ಮಹತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅ.15 ರಿಂದ 18ರವರೆಗೆ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಕೊಕ್ಕೊ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಸ್.ಭಾಸ್ಕರ್ ಶೆಟ್ಟಿ ತಿಳಿಸಿದರು.

ದಕ್ಷಿಣ ವಲಯದ ವ್ಯಾಪ್ತಿಗೊಳಪಡುವ ರಾಜ್ಯಗಳ 56 ವಿಶ್ವವಿದ್ಯಾಲಯಗಳಿಂದ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲೇ ಮೊದಲ ಬಾರಿಗೆ ದಕ್ಷಿಣ ವಲಯ ಮಟ್ಟದ ಬೃಹತ್ ಕ್ರೀಡಾಕೂಟವನ್ನು ಸರ್ಕಾರಿ ಕಾಲೇಜು ಆಯೋಜಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅ.15ರಂದು ಬೆಳಿಗ್ಗೆ 9.30ಕ್ಕೆ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಕಿಶೋರ್ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭ ಅ.18ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಮಂಗಳೂರು ವಿವಿ ಕುಲಸಚಿವ ಪ್ರೊ.ಎ.ಎಂ.ಖಾನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಟೂರ್ನಿಗಾಗಿ ಸಿದ್ಧತೆಗಳು ನಡೆಯುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸೇಂಟ್‌ ಸಿಸಿಲಿಸ್ ಶಾಲೆಯಲ್ಲಿ ತಲಾ 2 ಅಂಕಣಗಳನ್ನು ನಿರ್ಮಿಸಲಾಗಿದೆ. ಹೊನಲು ಬೆಳಕಿನ ಪಂದ್ಯಗಳು ನಡೆಯಲಿವೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಊಟ–ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

70 ನಿರ್ಣಾಯಕರು, 100 ಸ್ವಯಂ ಸೇವಕರು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಇದು ಅತ್ಯುತ್ತಮ ವೇದಿಕೆಯಾಗಲಿದೆ ಎಂದು ಭಾಸ್ಕರ್ ಶೆಟ್ಟಿ ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಷನ್‌ ಕುಮಾರ್ ಶೆಟ್ಟಿ ಅವರೂ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !