ಸೋಮವಾರ, ಸೆಪ್ಟೆಂಬರ್ 27, 2021
25 °C

ಅಂಗಾಂಗ ದಾನ ಸಂಕಲ್ಪ ಮಾಡೋಣ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ‘ವಿಶ್ವ ಅಂಗಾಂಗ ದಾನದ ದಿನದಂದು ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡೋಣ, ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ದೇಹದ ಹಲವು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗುತ್ತಿದೆ. ಮರಣಾ ನಂತರ ದೇಹವನ್ನು ಮಣ್ಣಾಗಿಸದೆ ಅಂಗಾಂಗ ದಾನದ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗೋಣ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಎನ್‌ಐಎ ಕಚೇರಿ; ಸುಳಿವು ನೀಡಿದ ಬೊಮ್ಮಾಯಿ

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರ ಸಮಿತಿಯ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು