ಉಡುಪಿ: ದಿ. ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಬರಹಗಾರ್ತಿ ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ. 17ರಂದು ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಿರಿಜಾಶಾಸ್ತ್ರಿ ಅವರು ಮೈಸೂರಿನ ಕೆ.ಆರ್. ನಗರ ತಾಲ್ಲೂಕಿನ ಸಾಲಿಗ್ರಾಮದವರಾಗಿದ್ದು, ಅವರ ಬರಹಗಳು ಎಲ್ಲಾ ಪ್ರಕಾರಗಳಲ್ಲೂ ಮೂಡಿದೆ. ಕವಿತೆ, ಪ್ರಬಂಧ, ಅನುವಾದ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿವೆ. ಸಂಶೋಧಕರಾಗಿ ಪ್ರಬಂಧಗಳನ್ನೂ ಬರೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.