ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡ್ತಾಡಿ: ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆ

Last Updated 3 ಜುಲೈ 2022, 2:10 IST
ಅಕ್ಷರ ಗಾತ್ರ

ಬ್ರಹ್ಮಾವರ: ಉಡುಪಿ ಜಿಲ್ಲೆಯವರಷ್ಟು ಮುಗ್ಧ ಹಾಗೂ ಅನ್ಯಾಯವಾದರೂ ಪ್ರತಿಭಟಿಸದೆ ಮೌನವಾಗಿರುವ ರೈತರು ದೇಶದಲ್ಲಿ ಬೇರೆಲ್ಲೂ ಇಲ್ಲ. ಇದನ್ನೇ ಬಂಡವಾಳವಾಗಿಸಿಕೊಂಡು ನಮಗೆ ಅನ್ಯಾಯ ಮಾಡುವುದು ಹಿಂದಿನಿಂದ ನಡೆದು ಬಂದಿದೆ ಎಂದು ಎಚ್. ಪ್ರತಾಪಚಂದ್ರ ಶೆಟ್ಟಿ ಹೇಳಿದರು.

ಯಡ್ತಾಡಿಯ ಪ್ರಗತಿಪರ ಕೃಷಿಕ ಸತೀಶ ಕುಮಾರ್‌ ಶೆಟ್ಟಿ ಅವರ ಮನೆಯಲ್ಲಿ ನಡೆದ ಯಾಂತ್ರೀಕೃತ ಕೃಷಿ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಮಾತನಾಡಿ, ಕೃಷಿ ಚಟುವಟಿಕೆಗೆ ಸಾಮರ್ಥ್ಯಕ್ಕಿಂತ ಆಸಕ್ತಿ ಮುಖ್ಯ ಎಂದರು.

ಕೃಷಿ ವಿಜ್ಞಾನ ಕೇಂದ್ರದ ಸುಧೀರ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕೋಟ ಹೋಬಳಿ ಸಹಾಯಕ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಚಂದ್ರಶೇಖರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬಾರ್ಕೂರು ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೀತಾರಾಮ ಶೆಟ್ಟಿ, ಜಯಶೀಲ ಶೆಟ್ಟಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ.ನವೀನ್, ಡಾ.ಶಂಕರ್, ರಾಜೇಶ್ ನಾಯ್ಕ, ಕೃಷಿಕ ಫಾರುಕ್ ಸಾಹೇಬ್ ಇದ್ದರು.

ಕೃಷಿಕ ಕೃಷ್ಣ ಅಡಿಗ ವಂದಿಸಿದರು. ಕಾರ್ಯಕ್ರಮದ ಸಂಯೋಜಕ ಸತೀಶ್ ಕುಮಾರ್ ಶೆಟ್ಟಿ ಯಡ್ತಾಡಿ ಸ್ವಾಗತಿಸಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT